SHIVAMOGGA | MALENADUTODAY NEWS | ಮಲೆನಾಡು ಟುಡೆ Jan 29, 2025
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಶರಾವತಿ ಜಲವಿದ್ಯುತ್ ಯೋಜನಾ ಪ್ರದೇಶದಲ್ಲಿ ಹೊಸದಾಗಿ ಶರಾವತಿ ಪಂಪ್ ಸ್ಟೋರೇಜ್ ಪ್ರಾಜೆಕ್ಟ್ ನಿರ್ಮಾಣಕ್ಕೆ ಈಗಾಗಲೇ ರಾಜ್ಯ ಸರ್ಕಾರ ಅನುಮತಿಯನ್ನು ನೀಡಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಅಪ್‌ಡೇಟ್ ಬಂದಿದ್ದು, ಅದರ ವಿವರ ಹೀಗಿದೆ. ಗೇರುಸೊಪ್ಪ ಮತ್ತು ಲಿಂಗನಮಕ್ಕಿ ಜಲಾಶಯದ ನಡುವೆ ಶರಾವತಿ ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ಶರಾವತಿ ಪಂಪ್ಸ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆ ಕಾಮಗಾರಿಗೆ ರಾಜ್ಯ ವನ್ಯಜೀವಿ ಮಂಡಳಿ ಸಭೆಯು ಅನುಮೋದನೆ ನೀಡಿದೆ.
ನಿನ್ನೆದಿನ ಬೆಂಗಳೂರುನಲ್ಲಿ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಪ್ರಾಜೆಕ್ಟ್‌ಗೆ ಷರತ್ತುಬದ್ದ ಅನುಮೋದನೆ ನೀಡಲಾಗಿದೆ. ಯೋಜನೆಗಾಗಿ 125 ಎಕರೆ ಅರಣ್ಯ ಭೂಮಿ ನೀಡುವ ಕುರಿತು ಸಭೆಯಲ್ಲಿ ಸಮ್ಮತಿಸಲಾಗಿದೆ. ಅಲ್ಲದೆ 9 ಸಾವಿರ ಮರ ಕಡಿಯಲು ಅನುಮತಿಸಲಾಗಿದೆ ಹಾಗೂ ಸಿಂಗಳೀಕಗಳ ಆವಾಸಸ್ಥಾನಕ್ಕೆ ದಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
SUMMARY | CM Siddaramaiah, State Wildlife Board meeting approve Sharavathi Pump Storage Project
KEY WORDS | CM Siddaramaiah, State Wildlife Board approve, Sharavathi Pump Storage Project