ಗೃಹಲಕ್ಷ್ಮೀ ಹಣವನ್ನು ಸಾಲದ ಖಾತೆಗೆ ಜಮ ಮಾಡುವಂತಿಲ್ಲ

ಹಂಚಿಕೊಳ್ಳಿ
WhatsApp Facebook X Telegram
ಗೃಹಲಕ್ಷ್ಮೀ ಹಣವನ್ನು ಸಾಲದ ಖಾತೆಗೆ ಜಮ ಮಾಡುವಂತಿಲ್ಲ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 7, 2025

ಶಿಕಾರಿಪುರ | ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಬ್ಯಾಂಕ್‌ ವ್ಯವಸ್ಥಾಪಕರು ಸಾಲದ ಖಾತೆಗೆ ಜಮೆ ಮಾಡಿಕೊಳ್ಳಬಾರದೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎಚ್ಚರಿಸಿದ್ದಾರೆ. 

ಇತ್ತೀಚೆಗೆ ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡ್ತಾ ಅವರು ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ನೇರವಾಗಿ ಹಾಕಲಾಗುತ್ತಿದೆ. ಈ ಹಣವನ್ನು ಯಾವುದೇ ಕಾರಣಕ್ಕೂ  ಬ್ಯಾಂಕ್‌ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾಮಾಡಿಕೊಳ್ಳಬಾರದು ಎಂದು ಎಚ್ಚರಿಸಿದರು. ಹಾಗೆಯೇ ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

SUMMARY | District in-charge minister Madhu Bangarappa warned bank managers not to credit the money under the Grihalakshmi scheme, one of the five guarantees of the state government, to the loan account.

KEYWORDS | Madhu Bangarappa, Grihalakshmi scheme, state government,

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor