ಮಂಡ್ಯದಲ್ಲಿ KSRTC ಬಸ್‌ ಅಪಘಾತ | 5 ಜನರ ಸ್ಥಿತಿ ಗಂಬೀರ

This Article Written by / 131 / ಫೆಬ್ರವರಿ 13, 2025

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 13, 2025

ಮಂಡ್ಯ |  ಜಿಲ್ಲೆಯ ಕೃಷ್ಣರಾಜಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

 ಇವತ್ತು ಬೆಳಗ್ಗೆ ಆಲೇನಹಳ್ಳಿಯಿಂದ ಕೆ.ಆರ್.ಪೇಟೆ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿದ್ದ ವೇಳೆ ಕೆಆರ್ ಪೇಟೆ ತಾಲೂಕಿನ ಕುಂದಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರಕ್ಕೆ ಡಿಕ್ಕಿಯಾಗಿದೆ.

ಇದರ ಪರಿಣಾಮ ಬಸ್‌ನಲ್ಲಿದ್ದ  20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ, ಘಟನೆಯಲ್ಲಿ ಗಾಯಗೊಂಡವರನ್ನು ಕೆ ಆರ್‌ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಮೈಸೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ  

SUMMARY  |  More than 20 people were injured when a KSRTC bus rammed into a tree at Krishnarajpet in Mandya district.

KEYWORDS | KSRTC, accident, Mandya, 

ಮುಂದಿನ ಸುದ್ದಿ ಒದಿ

Leave a Comment