SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 4, 2025
ಬೆಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪಿ ವಿ ವೆಂಕಟೇಶ್ ರವರು ಇದೀಗ ಅದೇ ಇಲಾಖೆಯಲ್ಲಿ ಡಿವೈಎಸ್ಪಿ ಯಾಗಿ ಮುಂಬಡ್ತಿ ಪಡೆದಿದ್ದಾರೆ.
ಶಿವಮೊಗ್ಗದ ದುರ್ಗಿಗುಡಿಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದ ಪಿ ವಿ ವೆಂಕಟೇಶ್ ನ್ಯಾಶನಲ್ ಕಾಲೇಜಿನಲ್ಲಿ ಪಿಯುಸಿ ಹಾಗು ಡಿವಿಎಸ್ ಕಾಲೇಜಿನಲ್ಲಿ ತಮ್ಮ ಡಿಗ್ರಿಯನ್ನು ಪೂರ್ಣ ಗೊಳಿಸಿದ್ದರು. ನಂತರ 1995 -97ನೇ ಸಾಲಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಪಡೆದು 2002ರಲ್ಲಿ ಪೊಲೀಸ್ ಇಲಾಖೆಗೆ ಸೇರಿದರು. ನಂತರ 2007 ರಿಂದ ಇಲ್ಲಿಯವರೆಗೆ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಆಗಿ ರಾಮನಗರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ಬೆಂಗಳೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ ಇವರು ಇದೀಗ ಅದೇ ಇಲಾಖೆಯಲ್ಲಿ ಡಿವೈಎಸ್ಪಿ ಯಾಗಿ ಮುಂಬಡ್ತಿ ಪಡೆಯುವ ಮೂಲಕ ದೊಡ್ಡ ಹುದ್ದೆಯನ್ನು ಅಲಂಕರಿಸಿದ್ದಾರೆ.
SUMMARY | P V Venkatesh, who was working as lokayukta police inspector in Bengaluru, has now been promoted to the post of DySP in the same department.
KEYWORDS | P V Venkatesh, lokayukta police inspector, DySP,