SHIVAMOGGA| MALENADUTODAY NEWS | ಮಲೆನಾಡು ಟುಡೆ Mar 7, 2025
ಸಿಎಂ ಸಿದ್ದರಾಮಯ್ಯ ತಮ್ಮ 16 ನೇ ಬಜೆಟ್ ಮಂಡಿಸಿದ್ದಾರೆ. 4,09,549 ಕೋಟಿ ರೂಪಾಯಿಯ ಆಯವ್ಯಯ ಬಜೆಟ್‌ನಲ್ಲಿ ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಿಗೆ ಕೆಲವೊಂದು ಘೋಷಣೆಗಳನ್ನು ಮಾಡಿದ್ದಾರೆ.
ಮುಖ್ಯವಾಗಿ ಮಲೆನಾಡು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಸಮಸ್ಯೆಯಾದ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ.ಈ ನಿಟ್ಟಿನಲ್ಲಿ ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂಪಾಯಿಗಳನ್ನು ಸಿಎಂ ಸಿದ್ದರಾಮಯ್ಯ ಒದಗಿಸಿದ್ದಾರೆ.
ಇನ್ನೂ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲವೆಂದ ಸಿದ್ದರಾಮಯ್ಯ, ಈ ಯೋಜನೆಗೆ ರಾಜ್ಯ ಸರ್ಕಾರವು ಆಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ ಎಂದು ತಿಳಿಸಿದರು.
ಇದರ ಜೊತೆಯಲ್ಲಿ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಲೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.
ಮಲೆನಾಡಿನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಪ್ಯಾಕೆಜ್ ಅಡಿಯಲ್ಲಿ 10 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಮೇಲಾಗಿ ನಕ್ಸಲ್ ಮುಕ್ತವಾಗಿರುವುದರಿಂದ ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡಲಾಗುವುದು ಬಜೆಟ್‌ನಲ್ಲಿ ಸಿಎಂ ತಿಳಿಸಿದ್ದಾರೆ.
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು ಎಂದಿರುವ ಸಿದ್ದರಾಮಯ್ಯ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದರು
ಸಾಂಕ್ರಾಮಿಕ ಕಾಯಿಲೆ ಚಿಕನ್‌ಗುನ್ಯ, ಡೆಂಗ್ಯೂ ಮತ್ತು ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕೆಎಫ್‌ಡಿ ನಿಯಂತ್ರಣಕ್ಕಾಗಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಾಗುತ್ತದೆ ಎಂದಿದ್ದಾರೆ.