ಇನ್ಮುಂದೆ ಪಡಿತರ  ಚೀಟಿದಾರರಿಗೆ ಹಣದ  ಬದಲಿಗೆ ಅಕ್ಕಿ ವಿತರಣೆ | ವಿತರಣೆ ಪ್ರಮಾಣ ಹೇಗೆ

ಹಂಚಿಕೊಳ್ಳಿ
WhatsApp Facebook X Telegram
ಇನ್ಮುಂದೆ ಪಡಿತರ  ಚೀಟಿದಾರರಿಗೆ ಹಣದ  ಬದಲಿಗೆ ಅಕ್ಕಿ ವಿತರಣೆ | ವಿತರಣೆ ಪ್ರಮಾಣ ಹೇಗೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 14, 2025

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅನ್ನ ಭಾಗ್ಯವೂ ಒಂದಾಗಿದೆ. ಈ ಹಿಂದೆ ರಾಜ್ಯ ಸರ್ಕಾರ ಮನೆಯ ಪ್ರತಿಯೊಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವ ಬದಲಿಗೆ 5 ಕೆಜಿ ಅಕ್ಕಿ ಕೊಟ್ಟು ಉಳಿದ 5 ಕೆಜಿ ಅಕ್ಕಿಯ ಹಣವನ್ನು ಮನೆಯ ಮಾಲೀಕರ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿತ್ತು. ಅದರಂತೆ ಹಣವನ್ನು ಜಮಾ ಮಾಡುತ್ತಿತ್ತು. ಆದ್ರೆ ಇದೀಗ ಅಕ್ಕಿ ಹಣವನ್ನು ವರ್ಗಾಯಿಸುವ ಪ್ರಕ್ರಿಯೆ ಬದಲಾಗಿ 2025 ರ ಫೆಬ್ರವರಿ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ವಿತರಣೆ ಮಾಡಲು ತೀರ್ಮಾನಿಸಿದೆ.

ವಿತರಣೆ ಪ್ರಮಾಣ ಹೇಗೆ

ಅಂತ್ಯೋದಯ ಪಡಿತರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ. ಅಕ್ಕಿ. 4 ಸದಸ್ಯರಿರುವ ಕಾರ್ಡಿಗೆ 45 ಕೆ.ಜಿ. ಅಕ್ಕಿ, 5 ಸದಸ್ಯರರಿರುವ ಕಾರ್ಡಿಗೆ 65 ಕೆ.ಜಿ. ಅಕ್ಕಿ, 6 ಸದಸ್ಯರಿರುವ ಕಾರ್ಡಿಗೆ 85 ಕೆ.ಜಿ. ಅಕ್ಕಿ, 7 ಸದಸ್ಯರಿರುವ ಕಾರ್ಡುದಾರರಿಗೆ 105 ಕೆ.ಜಿ ಅಕ್ಕಿ ,8 ಸದಸ್ಯರಿರುವ ಕಾರ್ಡಿಗೆ 125 ಕೆ.ಜಿ. ಅಕ್ಕಿ, 9 ಸದಸ್ಯರಿರುವ ಕಾರ್ಡಿಗೆ 145 ಕೆ.ಜಿ. ಅಕ್ಕಿ, 10 ಸದಸ್ಯರಿರುವ ಕಾರ್ಡಿಗೆ 165 ಕೆ.ಜಿ. ಅಕ್ಕಿ, 11 ಸದಸ್ಯರಿರುವ ಕಾರ್ಡಿಗೆ 185 ಕೆ.ಜಿ. ಅಕ್ಕಿ, 12 ಸದಸ್ಯರಿರುವ ಕಾರ್ಡಿಗೆ 205 ಕೆಜಿ. ಅಕ್ಕಿಯನ್ನು ಹಾಗೂ ಆದ್ಯತಾ ಪಡಿತರ(ಪಿಪಿಹೆಚ್/ಬಿಪಿಎಲ್) ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರಿಗೆ 15 ಕೆ.ಜಿ. ಅಕ್ಕಿಯನ್ನು ಕೊಡಲಾಗುತ್ತದೆ. 

ಪಡಿತರ ಚೀಟಿದಾರರು ಮಾರ್ಚ್ ತಿಂಗಳ ಅಂತ್ಯದವರೆಗೆ ತಮ್ಮ ವ್ಯಾಪ್ತಿಯ ನ್ಯಾಯ ಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಕೊಟ್ಟು ರಶೀದಿ ಪಡೆದು ಉಚಿತವಾಗಿ ಆಹಾರಧಾನ್ಯವನ್ನು ಪಡೆದುಕೊಳ್ಳಬಹುದಾಗಿದೆ. ಒಂದು ವೇಳೆ ನ್ಯಾಯ ಬೆಲೆ ಅಂಗಡಿಯವರು ಕಡಿಮೆ ಪ್ರಮಾಣದಲ್ಲಿ ಅಕ್ಕಿಯನ್ನು ವಿತರಿಸಿದಲ್ಲಿ. ಟೋಲ್‌ಫ್ರೀ ಸಂ.1967, ಆಹಾರ ನಿರೀಕ್ಷಕರ ಮೊ.ಸಂ. 9611195920 ಗೆ ದೂರು ಸಲ್ಲಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಅನೌಪಚಾರಿಕ ಪಡಿತರ ಪ್ರದೇಶ ಭದ್ರಾವತಿಯ ಸಹಾಯಕ ನಿರ್ದೇಶಕರು(ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SUMMARY | The state government has decided to distribute an additional 5 kg of rice to eligible beneficiaries.

KEYWORDS |  5 kg  rice, state government, guarantee scheme,

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor