ಸರ್ಕಾರಿ ಬಸ್‌ನಲ್ಲಿ ಪುರುಷರಿಗೂ ಫ್ರೀ ಟಿಕೆಟ್‌ ಕೊಡಿ | ಲಿಂಗ ತಾರತಮ್ಯದ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ದರಾದ ವಕೀಲ ಕೆ ವಿ ಪ್ರವೀಣ್‌

13

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 14, 2025 ‌‌ ‌‌

ಬಸ್‌ನಲ್ಲಿನ ಉಚಿತ ಪ್ರಯಾಣವನ್ನು ಪುರುಷರಿಗೂ ವಿಸ್ತರಿಬೇಕು ಎಂಬ ಆಗ್ರಹ ಕೇಳಿಬಂದಿದೆ. ಅಲ್ಲದೆ ಈ ಸಂಬಂಧ ಸುಪ್ರೀಂಕೋರ್ಟ್‌ಗೆ ಮೊರೆಹೋಗಲು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ವಕೀಲರಾದ ಕೆವಿ ಪ್ರವೀಣ್‌ ಮುಂದಾಗಿದ್ದಾರೆ. 

ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತವಾಗಿ ಓಡಾಡುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ವಕೀಲ ಕೆ.ವಿ. ಪ್ರವೀಣ ಎಂಬುವರು ಮಾರ್ಚ್‌ 12 ರಂದು ಅಧಿಕಾರಿಗಳಿಗೆ ರಿಜಿಸ್ಟ್ರಾರ್ ಪೋಸ್ಟ್ ಮೂಲಕ ಮನವಿಯನ್ನು ಸಲ್ಲಿಸಿದ್ದಾರೆ. 

 

ಸರ್ಕಾರಿ ಸ್ವಾಮ್ಯದ ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ಸಾಮಾನ್ಯ ಬಸ್ಸುಗಳಲ್ಲಿ ಮಹಿಳೆಯರಿಗೆ ಶಕ್ತಿ ಯೋಜನೆ ಯೋಜನೆಯ ಅಡಿಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿದ್ದೀರಿ. ಇದು ಭಾರತ ಸಂವಿಧಾನದ 14ನೇ ವಿಧಿಯ ಪ್ರಕಾರ ಲಿಂಗ ತಾರತಮ್ಯವಾಗಿದೆ. ಮಹಿಳೆ ಎಂಬ ಮಾತ್ರಕ್ಕೆ ಯೋಜನೆಯನ್ನು ನೀಡಿ ಪುರುಷರನ್ನು ಕಡೆಗಣಿಸಲಾಗಿದೆ , ಈ ಸಂಬಂಧ  ಪುರುಷರಿಗೂ ಉಚಿತ ಪ್ರಯಾಣದ ಅವಕಾಶವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ಇದು ಸರ್ಕಾರದಿಂದ ಸಾಧ್ಯವಾಗದಿದ್ದಲ್ಲಿ ಸೂಕ್ತ ನ್ಯಾಯಾಲಯದಲ್ಲಿ ನಿಮ್ಮನ್ನು ಪಾರ್ಟಿಯನ್ನಾಗಿ ಮಾಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

Share This Article