ಹೊಳೆಹೊನ್ನೂರು | ಪಂಪ್‌ಸೆಟ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ | 18 ಹರೆಯದ ಯುವತಿ ಸಾವು

ಹಂಚಿಕೊಳ್ಳಿ
WhatsApp Facebook X Telegram
ಹೊಳೆಹೊನ್ನೂರು | ಪಂಪ್‌ಸೆಟ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ | 18 ಹರೆಯದ ಯುವತಿ ಸಾವು

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 15, 2025 ‌‌ ‌‌

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆಯಬಾರದಂತಹ ದುರಂತ ಸಂಭವಿಸಿದೆ. ಕರೆಂಟ್‌ ತಗುಲಿ 18 ವರುಷದ ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ.

ಘಟನೆ ನಡೆದಿದ್ದು ಹೇಗೆ?

ಇಲ್ಲಿನ ನಿವಾಸಿ ನಿಸರ್ಗ ಎಂಬಾಕೆ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್‌ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದಾರೆ. ಕರೆಂಟ್‌ ತಗುಲಲು ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಬೆನ್ನಲ್ಲೆ ನೆಲಕ್ಕೆ ಬಿದ್ದ ಅವರು ಅಲ್ಲಿಯೇ ಜೀವ ಕಳೆದುಕೊಂಡಿದ್ದಾರೆ.  ಸ್ಥಳೀಯ ಸರ್ಕಾರಿ ಪದವೀಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನಿಸರ್ಗ, ಉತ್ತಮ ವಿದ್ಯಾರ್ಥಿನಿಯಾಗಿದ್ದರು.  

ಹಂಚಿಕೊಳ್ಳಿ
WhatsApp Facebook X Telegram
malenadumedia@gmail.com
ಲೇಖಕರ ಬಗ್ಗೆ

[email protected]

Malenadu Today Contributor