SHIVAMOGGA| MALENADUTODAY NEWS | ಮಲೆನಾಡು ಟುಡೆ Mar 15, 2025
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕುನಲ್ಲಿ ಇದೇ ಮಾರ್ಚ್ 17 ರಂದು ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಳ್ಳಲಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯುತ್ಸವ ಹಾಗೂ ಬೃಹತ್ ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾರ್ಚ್ 17ರಂದು ಸಂಜೆ 5ಕ್ಕೆ ಸಾಗರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಪ್ರತಿಮಾ ಜೋಗಿ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ವಿಶ್ವಹಿಂದೂ ಪರಿಷತ್ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಶ್ರೀಕಾಂತ್ ಪರಾಂಡೆ ಉದ್ಘಾಟಿಸುವರು ಹಾಗೂ ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಾಗ್ನಿ ಚಕ್ರವರ್ತಿ ಸೂಲಿಬೆಲೆ ದಿಕ್ಕೂಚಿ ಭಾಷಣ ಮಾಡುವರು. ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಉಪಸ್ಥಿತರಿರುವರು. ಇದಕ್ಕೂ ಮೊದಲು ಮಹಾಗಣಪತಿ ದೇವಸ್ಥಾನ ದಿಂದ ಶೋಭಾಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದರು.