ಜೋಗ ಪ್ರವೇಶಕ್ಕೆ ನಿಷೇಧ | ಇತ್ತ ಪರ್ವತ ಶ್ರೇಣಿಗಳ ಪ್ರವಾಸಕ್ಕೆ ಮೂರು ದಿನ ನಿರ್ಬಂಧ!

13

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 16, 2025 ‌‌ ‌‌

ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರವೇಶಕ್ಕೆ ಪ್ರವಾಸಿಗರಿಗೆ ವಿಧಿಸಿರುವ ನಿರ್ಬಂಧ ಮುಂದುವರೆಸಲಾಗಿದೆ. ಈ ಸಂಬಂಧ ಪೂರ್ತಿ ವರದಿಯನ್ನು ಇಲ್ಲಿ ಓದಬಹುದು  Ban on tourist entry to Jog Falls | ಜೋಗ ಫಾಲ್ಸ್‌ಗೆ ಪ್ರವಾಸಿಗರಿಗೆ ನಿರ್ಬಂಧ ವಿಸ್ತರಣೆ | ಎಲ್ಲಿವರೆಗೂ ಗೊತ್ತಾ?

- Advertisement -

ಇದರ ಬೆನ್ನಲ್ಲೆ ಇದೀಗ ಚಿಕ್ಕಮಗಳೂರಿನಲ್ಲಿ ಮೂರು ಬೆಟ್ಟ ಪ್ರದೇಶಗಳಿಗೆ ಮೂರು ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.  ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ. ಪೀಠದಲ್ಲಿ ಮಾರ್ಚ್ 15 ರಿಂದ 17ರವರೆಗೆ ವಾರ್ಷಿಕ ಉರುಸ್ ಕಾರ್ಯಕ್ರಮ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಹೆಚ್ಚು ಜನರು ಇಲ್ಲಿಗೆ ಬರುವ ಸಾಧ್ಯತೆ ಇದೆ. ಆದರೆ ಐಡಿ ಪೀಠಕ್ಕೆ ತೆರಳುವ ರಸ್ತೆಯಲ್ಲಿ ಕಿರಿದಾಗಿದ್ದು, ಅಪಾಯಕ್ಕೆ ದಾರಿ ಮಾಡಿಕೊಡುವ ಸಂಭವವಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಈ ರಸ್ತೆಯಲ್ಲಿ ಮೂರು ದಿನಗಳ ಕೆಎಸ್ಆರ್‌ಟಿಸಿ ಮತ್ತು ಕೆಎಸ್‌ಆರ್‌ಪಿ ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿದ್ದಾರೆ. 

ಇನ್ನೂ ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ ಮತ್ತು ಝರಿಫಾಲ್ಸ್‌ ಈ ಭಾಗದಲ್ಲಿಯೇ ಬರುವುದರಿಂದ ಪ್ರವಾಸಿಗರ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಈಗಾಗಲೇ  ಬಾಬಾ ಬುಡನ್ ಗಿರಿಯ ವ್ಯಾಪ್ತಿಯಲ್ಲಿ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತಿದೆ. 

Share This Article
Leave a Comment

Leave a Reply

Your email address will not be published. Required fields are marked *