SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 18, 2025
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಇತರೆ ಅರೋಪಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಅದೇನೆಂದರೆ ಈ ಹಿಂದೆ ಹೈ ಕೋರ್ಟ್ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ನೀಡಿರುವ ಕ್ರಮವನ್ನು ಪ್ರಶ್ನಿಸಿ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದೀಗ ಏಪ್ರಿಲ್ 2 ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಈ ಸಂಬಂಧ ಗೃಹ ಇಲಾಖೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ಯಾವರೀತಿಯ ತೀರ್ಪನ್ನು ನೀಡಲಿದೆ ಎಂದು ಕಾದು ನೋಡಬೇಕಿದೆ.
SUMMARY | Actor Darshan and other accused in the Renukaswamy murder case in Chitradurga have received a big shock.
KEYWORDS | Actor Darshan, Renukaswamy murder case, supreme court,