SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 19, 2025
ಶಿವಮೊಗ್ಗ | ಆಶಾ ಕಾರ್ಯಕರ್ತೆರಿಗೆ ಪ್ರೋತ್ಸಾಹ ಧನ ಸೇರಿಸಿ ಕನಿಷ್ಠ ರೂ 10,000 ಮಾಸಿಕ ಗೌರವಧನ ಮತ್ತು ಈ ಬಜೆಟ್ ನಲ್ಲಿ ರಾಜ್ಯ ಸರ್ಕಾರದಿಂದ ರೂ 1000 ಹೆಚ್ಚಳ ಆದೇಶ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯ ಸಂಘದ ಜಿಲ್ಲಾ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಎಪ್ರಿಲ್ 2019ರಿಂದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಸೇರಿಸಿ ಕನಿಷ್ಠ 10,000 ರೂಪಾಯಿಗಳ ಗೌರವಧನ ನೀಡಬೇಕು ಅದನ್ನು ಹೊರತು ಪಡಿಸಿ ಕಾಂಪೋ ನೆಟ್ ಗಳು ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಬೇಕು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್ ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಲ್ಲಿ ಅಂತಹ ಆಶಾ ಕಾರ್ಯಕರ್ತೆಯರಿಗೆ ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ ಹತ್ತು ಸಾವಿರ ಗ್ಯಾರಂಟಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
SUMMARY | A memorandum was submitted to the district collectors demanding honorarium for ASHA workers and an order for an increase of Rs 1,000 from the state government in this budget.
KEYWORDS | ASHA workers, demanding, state government,