SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 24, 2025
ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡು ಬಾಲಕ ಸೇರಿದಂತೆ ಐದು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ಹೊಸೂರ ಗ್ರಾಮದ ಬಸಪ್ಪ ಫಕ್ಕಿರಪ್ಪ ಆದಿ ಎಂಬುವವವರ ಮನೆಯಲ್ಲಿ ನಡೆದಿದೆ.
ಅನಿಲ ಸೋರಿಕೆಯಿಂದ ಎಲ್ಲೆಡೆ ವಾಸನೆ ಬರಲು ಆರಂಭಿಸಿತು. ಆಗ ಪಕ್ಕದ ಮನೆಯವರು ಬಂದು ಮುಚ್ಚಿದ್ದ ಬಾಗಿಲು ತೆಗೆದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ14 ವರ್ಷದ ಬಾಲಕ ಸೇರಿ 6 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಲಕ್ಷ್ಮವ್ವ ಕಣವಿ, ಬಸವಣ್ಣೆವ್ವ ಹೊರಪೇಟಿ, ಮಂಜುಳಾ, ನಿರ್ಮಲ ಹಾಗೂ ಶರಣಪ್ಪಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SUMMARY | Five people, including a boy, sustained serious injuries when the cylinder exploded due to a gas leak
KEYWORDS | gas leak, cylinder exploded, serious injuries, gadag,