SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 25, 2025
ಶಿವಮೊಗ್ಗ | ಶಾಲಾ ಶಿಕ್ಷಣ ಹಾಗು ಸಾಕ್ಷರತ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪನವರು ಇಂದು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮಕ್ಕೆ ಭೇಟಿ ನೀಡಿ, ಕುಸಿದು ಬಿದ್ದ ಭದ್ರಾ ಕಾಲುವೆಯಜನ ಸಂಪರ್ಕ ಸೇತುವೆಯನ್ನು ವೀಕ್ಷಿಸಿದರು. ನಂತರ ಸ್ಥಳೀಯ ಗ್ರಾಮಸ್ಥರು ತಮ್ಮ ತೋಟ ಹಾಗೂ ಗದ್ದೆಗಳಿಗೆ ಹೋಗಲು ತೊಂದರೆಯಾಗುತ್ತಿರುವುದನ್ನು ತಿಳಿದು ಶೀಘ್ರವಾಗಿ ನೂತನ ಸೇತುವೆ ನಿರ್ಮಾಣ ಕಾಮಗಾರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಬಳಿಕ ಹಂಚಿನ ಸಿದ್ದಾಪುರದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ”ಗೆ ಭೇಟಿನೀಡಿದ ಸಂದರ್ಭದಲ್ಲಿ ಶಾಲಾ ಮಕ್ಕಳು ಅತ್ಯಂತ ಪ್ರೀತಿಯಿಂದ ಸ್ವಾಗತಿಸಿ. ಶಾಲೆಯು ರಸ್ತೆ ಹೆದ್ದಾರಿ ಪಕ್ಕದಲ್ಲಿರುವುದರಿಂದಾಗಿ ವಾಹನಗಳು ಎಡಬಿಡದೆ ಸಂಚರಿಸುತ್ತಿರುತ್ತವೆ. ಆದ್ದರಿಂದ ಅಪಘಾತ ಸಂಭವಿಸದಂತೆ ಕ್ರಮ ಕೈಗೊಳ್ಳಲು ಮನವಿ ಮೇರೆಗೆ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು.
ಈ ವೇಳೆ ಜನಪ್ರತಿನಿಧಿಗಳು, ಮುಖಂಡರು, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
SUMMARY | He visited Hanchina Siddapura village in Shivamogga Rural taluk and inspected the “People’s Contact Bridge” of the collapsed Bhadra canal
KEYWORDS | Hanchina Siddapura, Shivamogga, Contact Bridge, madhu bangarappa,