SHIVAMOGGA| MALENADUTODAY NEWS | ಮಲೆನಾಡು ಟುಡೆ Apr 1, 2025
ಕುಡಿಯುವ ನೀರು ಪೂರೈಕೆಗಾಗಿ ಭದ್ರಾ ಜಲಾಶಯದಿಂದ ಮುಂದಿನ ಮೂರು ದಿನ ಹೊಳೆಗೆ ನೀರು ಹರಿಸಲಾಗುತ್ತಿದೆ. ಈ ನೀರು ವಿವಿಧ ಜಿಲ್ಲೆಗಳ ಕುಡಿಯುವ ನೀರಿಗಾಗಿ ಬಳಕೆಯಾಗಲಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಅದರಂತೆ ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಕಾರ್ಯದರ್ಶಿಪ್ರಕಟಣೆ ನೀಡಿದ್ದಾರೆ.
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಇವತ್ತಿನಿಂದ ನೀರು ಹರಿಸಲಾಗುತ್ತಿದೆ. ಪ್ರತಿ ದಿನ 8,000 ಕ್ಯುಸೆಕ್‌ನಂತೆ ಏಪ್ರಿಲ್ 1ರ ಸಂಜೆ 6ರಿಂದ ಮೂರು ದಿನಗಳವರೆಗೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡಬಾರದು, ದನಗಳ ಮೈ ತೊಳೆಯಲು ನದಿಗೆ ಇಳಿಯಬಾರದು ಎಂದು ಕರ್ನಾಟಕ ನೀರಾವರಿ ನಿಗಮ ತನ್ನ ಮುನೆಚ್ಚರಿಕಾ ಪ್ರಕಟಣೆ ನೀಡಿದೆ.
ಅಲ್ಲದೆ ವಿದ್ಯುತ್ ಹಾಗೂ ಡೀಸೆಲ್ ಪಂಪ್‌ಸೆಟ್ ಮತ್ತು ಟ್ಯಾಂಕರ್‌ಗಳ ಮೂಲಕ ಅನಧಿಕೃತವಾಗಿ ನದಿಯಿಂದ ನೀರು ಎತ್ತುವುದು ಹಾಗೂ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದ್ದು, ಕಾನೂನು ಕ್ರಮದ ಎಚ್ಚರಿಕೆಯನ್ನು ಸಹ ನೀಡಲಾಗಿದೆ.