ನಾಳೆ ನಾಡಿದ್ದು ಮಳೆ ಇದೆಯಂತೆ, ಹೌದಾ!? ಹವಾಮಾನ ಇಲಾಖೆ ಮುನ್ಸೂಚನೆ

ಹಂಚಿಕೊಳ್ಳಿ
WhatsApp Facebook X Telegram
ನಾಳೆ ನಾಡಿದ್ದು ಮಳೆ ಇದೆಯಂತೆ, ಹೌದಾ!?  ಹವಾಮಾನ ಇಲಾಖೆ ಮುನ್ಸೂಚನೆ

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 5, 2025 ‌‌ 

ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಇನ್ನಷ್ಟು ದಿನ ಮಳೆ ಸುಡುವ ಸೆಖೆಯ ನಡುವೆ ತಣ್ಣಗಿನ ವಾತಾವರಣ ಸೃಷ್ಟಿಸಲಿದೆ. ವರುಣಾಗಮನದ ಬಗ್ಗೆ ಹವಾಮಾನ ಇಲಾಖೆಯ ಮುನ್ಸೂಚನೆ ಹೀಗಿದೆ. 

ಇವತ್ತು  ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದಿರುವ ಹವಾಮಾನ ಇಲಾಖೆ ಜೋರಾಗಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ಉಳಿದೆಡೆ ಬಿಸಿಲು ಮುಂದುವರಿಯಲಿದೆ.   

ಇನ್ನೂ ಉತ್ತರ ಕರ್ನಾಟಕದ  ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಲದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ನಾಳೆ ಚಿಕ್ಕಮಗಳೂರು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಮತ್ತು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದರೆಡು ಸ್ಥಳಗಳು ಮಳೆ ಕಾಣಬಹುದು  

ಹಂಚಿಕೊಳ್ಳಿ
WhatsApp Facebook X Telegram
13
ಲೇಖಕರ ಬಗ್ಗೆ

13

Malenadu Today Contributor