KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’
ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಕಳ್ಳತನ ವಿಪರೀತವಾಗುತ್ತಿದೆ. ಕಣ್ಮುಂದೆಯೇ ಕಳ್ಳತನ ನಡೆದರೂ ಆರೋಪಿಗಳು ಪತ್ತೆಯಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಅದರಲ್ಲಿಯು ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಕಳ್ಳರ ಅಡ್ಡೆಯಾದಂತಿದ್ದು, ಕಳೆದ ಮೂರು ತಿಂಗಳಲ್ಲಿನಲ್ಲಿ ಇಲ್ಲಿ ದಾಖಲೆಯ ಕಳ್ಳತನ ಪ್ರಕರಣಗಳು ನಡೆದಿದೆ.
ಇದಕ್ಕೆ ಪೂರಕವಾಗಿ ಇದೀಗ ಮತ್ತೊಂದು ಕಳ್ಳತನ ಪ್ರಕರಣ ನಡೆದಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ಎಫ್ಐಆರ್ ದಾಖಲಾಗಿದೆ. ಶಿವಮೊಗ್ಗದ ಭದ್ರಾವತಿಯ ನಿವಾಸಿಯೊಬ್ಬರು ತಮ್ಮ ಹೆಂಡತಿ ಮಕ್ಕಳನ್ನು ದಾವಣಗೆರೆ ಮಾವನ ಮನೆಗೆ ಕಳುಹಿಸಿಕೊಡಲು ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟ್ಯಾಂಡ್ ಗೆ ಬಂದಿದ್ದರು.
ಬಳಿಕ ದಾವಣಗೆರೆ ಬಸ್ ಹತ್ತಿ ಪತ್ನಿಗಾಗಿ ಸೀಟು ಹಿಡಿದು ಅಲ್ಲಿಂದ ವಾಪಸ್ ಆಗಿದ್ದಾರೆ. ಈ ಮಧ್ಯೆ ಅವರ ಪತ್ನಿ ಫೋನ್ ಮಾಡಿ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಆಭರಣಗಳು ಕಾಣಿಸ್ತಿಲ್ಲ ಎಂದು ತಿಳಿಸಿದ್ದಾರರೆ. ರಶ್ ಇದ್ದ ಬಸ್ನಲ್ಲಿ ಯಾರೋ ಕಳ್ಳರು, ಸುಮಾರು 22 ಗ್ರಾಂ ತೂಕದ ಒಂದು ಬಂಗಾರದ ನೆಕ್ಲೆಸ್, ಮತ್ತು 11 ಗ್ರಾಂ ತೂಕದ ಒಂದು ಜೊತೆ ಬಂಗಾರದ ಜುಮಕಿ ಕದ್ದಿರುವುದು ಗೊತ್ತಾಗಿದ್ದು, ಈ ಸಂಬಂಧ ದೂರು ದಾಖಲಾಗಿದ್ದು, ಎಫ್ಐಆರ್ ದರ್ಜ್ ಆಗಿದೆ.
ಇನ್ನಷ್ಟು ಸುದ್ದಿಗಳು
ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL
ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ
