Ban on tourist entry to Jog Falls | ಜೋಗ ಫಾಲ್ಸ್‌ಗೆ ಪ್ರವಾಸಿಗರಿಗೆ ನಿರ್ಬಂಧ ವಿಸ್ತರಣೆ | ಎಲ್ಲಿವರೆಗೂ ಗೊತ್ತಾ?

13

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 15, 2025 ‌‌ ‌‌

ಜೋಗ ಜಲಪಾತದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಜೋಗದ ಮುಖ್ಯಧ್ವಾರದಲ್ಲಿ ಪ್ರವಾಸಿಗರಿಗೆ ಈಗಾಗಲೇ ಪ್ರವೇಶ ನಿರ್ಬಂಧ ವಿಧಿಸಿ ಆದೇಶ ಮಾಡಲಾಗಿತ್ತು. ಇದೀಗ ಈ ಆದೇಶವನ್ನು ಮುಂದಿನ ಏಪ್ರಿಲ್‌ 30 ರ ವರೆಗೂ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಪ್ರಕಟಣೆಯನ್ನು ನೀಡಿಲಾಗಿದ್ದು,  ವಿಶ್ವವಿಖ್ಯಾತ ಜೋಗ ಜಲಪಾತದ ಮುಖ್ಯ ದ್ವಾರದ ನವೀಕರಣ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ ಏಪ್ರಿಲ್ 30 ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ಮುಚ್ಚಲಾಗುವುದು ಎಂದು ತಿಳಿಸಲಾಗಿದೆ. 

- Advertisement -

ಜೋಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ನಿರ್ಮಾಣ ಕಾರ್ಯಕ್ಕೆ ಅನುಕೂಲವಾಗುವಂತೆ ಜನವರಿ 1 ರಿಂದ ಮಾರ್ಚ್ 15 ರವರೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದರು. ಮೇಲಾಗಿ ನಿಗದಿತ ಅವಧಿಯೊಳಗೆ ಕೆಲಸ ಪೂರ್ತಿ ಮಾಡಬೇಕು ಎಂದು ಸೂಚಿಸಿದ್ದರು. ಆದರೆ ಕೆಲಸ ಅಪೂರ್ಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಪೂರ್ಣಗೊಳ್ಳಲು ಇನ್ನಷ್ಟು ದಿನಗಳ ಅಗತ್ಯವಿರುವ ಹಿನ್ನೆಲೆಯಲ್ಲಿ, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನನುಕೂಲ ಹಾಗೂ ಅನಗತ್ಯ ಅಪಾಯ ಸಂಭವಿಸದೆ ಇರಲಿ ಎನ್ನುವ ಕಾರಣಕ್ಕೆ ಜೋಗಕ್ಕೆ ಮುಂದಿನ ಏಪ್ರಿಲ್ 30 ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. 

ಈ ಸಂಬಂಧ  ಜೋಗ ನಿರ್ವಹಣಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ ಮತ್ತು ಸಂದರ್ಶಕರು ನಿರ್ಬಂಧಿತ ಅವಧಿಯ ನಂತರ ತಮ್ಮ ಸಮಯಕ್ಕೆ ಅನುಗುಣವಾಗಿ ಯೋಜನೆ ರೂಪಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ, ಜನರು 08182-251444 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ

Share This Article
Leave a Comment

Leave a Reply

Your email address will not be published. Required fields are marked *