Bear Attack | ಭದ್ರಾವತಿಯಲ್ಲಿ ಕಾಣಿಸಿದ ಕರಡಿ | ತರೀಕೆರೆಯಲ್ಲಿ ಓರ್ವನ ಮೇಲೆ ದಾಳಿ
Bear spotted in Bhadravathi ̧| One attacked in Tarikeŗe
SHIVAMOGGA | MALENADUTODAY NEWS | Aug 8, 2024
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ತಿಮ್ಲಾಪುರದ ಕ್ಯಾಂಪ್‌ನಲ್ಲಿ ಕರಡಿಯೊಂದು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಕರಡಿ ಓಡಾಡಿರುವುದು ಸಿಸಿ ಕ್ಯಾಮರಾದಲ್ಲಿ ಕಾಣ ಸಿಕ್ಕಿದೆ. ಕರಡಿ ಕುರಿತು ಅರಣ್ಯ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು, ಅಧಿಕಾರಿಗಳು ಸಹ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಈ ಬಗ್ಗೆ ಅರಣ್ಯ ಅಧಿಕಾರಿಗಳು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅತ್ತ ಗ್ರಾಮಸ್ಥರಲ್ಲಿ ಕರಡಿಯ ಬಗ್ಗೆ ಸಣ್ಣ ಭಯ ಶುರುವಾಗಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಕರಡಿ ದಾಳಿ ಗಂಭೀರ ಗಾಯ
ಇನ್ನೂ ಅತ್ತ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದುಗ್ಲಾಪುರ ಗ್ರಾಮದಲ್ಲಿ ಕರಡಿಯೊಂದು ದಾಳಿ ನಡೆಸಿದ ಪರಿಣಾಮವಾಗಿ ಸ್ಥಳೀಯ ನಿವಾಸಿಯೊಬ್ಬರು ಗಾಯಗೊಂಡಿದ್ದಾರೆ. ಸೋಮಶೇಖರಪ್ಪ ಎಂಬವರು ಜಮೀನಿಗೆ ತೆರಳುತ್ತಿದ್ದ ವೇಳೆ ಅವರ ಮೇಲೆ ಕರಡಿ ದಾಳಿ ಮಾಡಿದೆ. ಇಲ್ಲಿಯ ದುಗ್ಗಾಪುರ ಸಮೀಪ ಕರಡಿ ಓಡಾಡುತ್ತಿದ್ದು, ಅರಣ್ಯ ಅಧಿಕಾರಿಗಳು ಎಚ್ಚರ ವಹಿಸಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.