KRIDL ಅಧ್ಯಕ್ಷ ಸ್ಥಾನ ವಹಿಸಿದ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್
Bhadravathi MLA B.K. Sangamesh , chairman of KRIDL
Shivamogga | Jan 29, 2024 | ರಾಜ್ಯಸರ್ಕಾರ ಇತ್ತೀಚೆಗೆಷ್ಟೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಆಯ್ದ ಶಾಸಕರ ಹೆಸರನ್ನ ಲಿಸ್ಟ್ ಮಾಡಿ ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ರಿಗೆ ಅಧ್ಯಕ್ಷ ಸ್ಥಾನವನ್ನು ನೀಡಿತ್ತು.
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತಕ್ಕೆ ಶಿವಮೊಗ್ಗ ಜಿಲ್ಲೆ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರನ್ನ ನೇಮಿಸಲಾಗಿತ್ತು.
ಇತ್ತ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿಯ ಅಧ್ಯಕ್ಷ ಸ್ಥಾನ ನೀಡಲಾಗಿತ್ತು.
ಇದೀಗ KRIDL ನ ನೂತನ ಅಧ್ಯಕ್ಷರಾಗಿ ಇಂದು ಬಿಕೆ ಸಂಗಮೇಶ್ ರವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅವರನ್ನ ಅಭಿನಂದಿಸಲಾಗಿದೆ. ತಮ್ಮ ಅಭಿಮಾನಿಗಳು ಕಾರ್ಯಕರ್ತರ ಸಮ್ಮುಖದಲ್ಲಿ ಅವರು ಅಧಿಕಾರ ಸ್ವೀಕರಿಸಿದ್ದಾರೆ