ಭದ್ರಾವತಿ ನಗರಸಭೆ ಅಧ್ಯಕ್ಷ ಸ್ಥಾನ | ಚುನಾವಣೆಗೆ ದಿನಾಂಕ ಫಿಕ್ಸ್ | ಡಿಟೇಲ್ಸ್ ಇಲ್ಲಿದೆ
Bhadravathi Municipal Council President election, Bhadravati Taluk, Shivamogga District

SHIVAMOGGA | MALENADUTODAY NEWS | ಮಲೆನಾಡು ಟುಡೆ Feb 5, 2025
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ನಗರಸಭೆಯ 10 ನೇ ಅವಧಿಯ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಇದೇ ಫೆಬ್ರವರಿ 15 ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಈ ಸಂಬಂಧ ಚುನಾವಣಾಧಿಕಾರಿಯು ಆಗಿರುವ ಉಪ ವಿಭಾಗಾಧಿಕಾರಿ ಸತ್ಯನಾರಾಯಣ್ ಘೋಷಣೆ ಮಾಡಿದ್ದಾರೆ.
ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನದ ಕುರಿತಾಗಿ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಈ ಸಂಬಂದ ತಕರಾರು ಅರ್ಜಿ ಸಲ್ಲಿಸಿ ತಡೆಯಾಜ್ಞೆ ತಂದಿದ್ದರಿಂದ ಈ ಹಿಂದೆಯೆ ನಡೆಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆ ನಡೆದಿರಲಿಲ್ಲ. ಬದಲಾಗಿ ಉಪಾಧ್ಯಕ್ಷ ಸ್ಥಾನದ ಆಯ್ಕೆ ಮಾತ್ರ ನಡೆದಿತ್ತು. ಕಾಂಗ್ರೆಸ್ ಎಂ ಮಣಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಈ ನಡುವೆ ಜನವರಿ 22 ರಂದು ಹೈಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸಿ ಚುನಾವಣೆಗೆ ಅನುವು ಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಸಾಮಾನ್ಯ ಮಹಿಳಾ ಮೀಸಲಾತಿ ಯಂತೆ ಚುನಾವಣೆ ನಡೆಯಲಿದ್ದು, ಫೆಬ್ರವರಿ 15 ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
SUMMARY | election for the post of President of Bhadravathi Municipal Council, Bhadravati Taluk, Shivamogga District will be held on February 15th
KEY WORDS | Bhadravathi Municipal Council President election, Bhadravati Taluk, Shivamogga District