ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿಯ ಎಸ್‌ಸಿ ಮತ್ತು ಎಸ್ ಟಿ ಮೋರ್ಚಾ ವತಿಯಿಂದ ಪ್ರತಿಭಟನೆ

Bjp's SC and ST Morcha stage protest against state government's anti-Dalit policies

 ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿಯ ಎಸ್‌ಸಿ ಮತ್ತು ಎಸ್ ಟಿ ಮೋರ್ಚಾ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು ಎಸ್ಇಪಿ -ಟಿಎಸ್ಪಿ ಯೋಜನೆ ಅಡಿ ಮೀಸಲಿಟ್ಟಿದ್ದ 1144 ಕೋಟಿ ಹಣವನ್ನು ಗ್ಯಾರೆಂಟಿ ಯೋಜನೆಗೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರ ಬಗ್ಗೆ ಡೋಂಗಿ ಕಾಳಜಿಯನ್ನು ಪ್ರದರ್ಶಿಸುತ್ತಿದೆ. ದಲಿತರ ಹಿತರಕ್ಷಣೆ ಮಾಡಬೇಕಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಈ ಅನ್ಯಾಯದ ವಿರುದ್ಧ ಮಾತನಾಡದೆ  ಮೌನವಹಿಸಿದ್ದಾರೆ.ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಲು ಮುಂದಾಗಿದೆ

ಆದರೆ ಮುರಾರ್ಜಿ ಶಾಲೆ, ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಪರಿಶಿಷ್ಟರ ವಸತಿ ನಿರ್ಮಾಣ ಮತ್ತಿತರ ಉದ್ದೇಶಕ್ಕೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ.ರೈತನಿಗೆ ಯೋಜನೆ ಅಡಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಕಿಸಾನ್ ಸಮ್ಮಾನ್ ಯೋಜನೆ ಅಡಿ ಹೆಚ್ಚುವರಿಯಾಗಿ ನೀಡುತ್ತಿದ್ದ ನಾಲ್ಕು ಸಾವಿರ ರೂಪಾಯಿಗೂ ಕತ್ತರಿ ಬಿದ್ದಿದೆ. ಈ ಮೂಲಕ ದಲಿತ ಸಮುದಾಯದ ಬಗ್ಗೆ ಕಾಂಗ್ರೆಸ್ ಸರ್ಕಾರ ಹೊಂದಿರುವ ನಿರ್ಲಕ್ಷ ಬಹಿರಂಗವಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಸೇರಿದಂತೆ ಎಸ್ಸಿ, ಎಸ್ಟಿ ಮೋರ್ಚಾದ ಅಧ್ಯಕ್ಷರುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು