Chikkamagaluru | ಸ್ವಂತ ಮಗನ ತಲೆಗೆ ಹಾರೆಯಿಂದ ಹೊಡೆದು ಸಾಯಿಸಿದ ತಂದೆ
Chikkamagaluru Father kills his own son
SHIVAMOGGA | MALENADUTODAY NEWS | Aug 8, 2024
ಚಿಕ್ಕಮಗಳೂರು ಜಿಲ್ಲೆಯಲ್ಲಿ ತಂದೆಯ ಮಗನನ್ನ ಹೊಡೆದು ಕೊಲೆ ಮಾಡಿದ ಘಟನೆ ಬಗ್ಗೆ ವರದಿಯಾಗಿದೆ. ಈ ಘಟನೆ ಮೂಡಿಗೆರೆ ತಾಲೂಕು ಮಾಕೋನಹಳ್ಳಿ ಗ್ರಾಮ ವ್ಯಾಪ್ತಿಯ ಇಂದಿರಾನಗರದಲ್ಲಿ ನಡೆದಿದೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಇಲ್ಲಿನ ನಿವಾಸಿ ಗೋಪಾಲಗೌಡ ತನ್ನ ಮಗ ಪ್ರಸನ್ನನನ್ನ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋಗಿ, ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಮೂಡಿಗೆರೆ ಪೊಲೀಸ್ ಠಾಣೆ
ಈ ವೇಳೆ ಹಾರೆಯಿಂದ ಮಗನ ತಲೆಗೆ ತಂದೆ ಹೊಡೆದಿದ್ದಾನೆ. ತಕ್ಷಣ ಕುಸಿದುಬಿದ್ದ ಮಗ ಅಲ್ಲಿಯೇ ಸಾವನ್ನಪ್ಪಿದ್ದಾನೆ.
ಈ ಸಂಬಂಧ ಮೂಡಿಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ