ತೀರ್ಥಹಳ್ಳಿ ಶ್ರೀ ಕೋದಂಡರಾಮ ಸ್ವಾಮಿ ದೇಗುಲದ ಆವರಣ ಸ್ವಚ್ಚಗೊಳಿಸಿದ ಕಾಂಗ್ರೆಸ್ ಕಾರ್ಯಕರ್ತರು!

Malenadu Today

SHIVAMOGGA  |  Jan 20, 2024  | ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಷ್ಟಾಪನೆ ಆಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲೆಡೆ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದೆ. ಪ್ರಾಣ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಯವರು ವೃತಾಚರಣೆ ಕೈಗೊಂಡಿದ್ದು ದೇವಸ್ಥಾನಗಳ ಸ್ಚಚ್ಚತೆ ಕಾರ್ಯದ ಅಭಿಯಾನವನ್ನು ಸಹ ಆರಂಭಿಸಿದ್ದರು. ಇತ್ತ ಬಿಜೆಪಿ ನಾಯಕರು ಸಹ ವಿವಿಧ ದೇಗುಲಗಳ ಆವರಣ ಕ್ಲೀನ್ ಮಾಡುವ ಕಾರ್ಯವನ್ನು ಕೈಗೊಂಡಿದ್ದರು. 

ಈ ನಡುವೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಹ ಶ್ರೀ ಕೋದಂಡರಾಮ ಸ್ವಾಮಿ ದೇವಾಲಯದ ಆವರಣ ಸ್ವಚ್ಚ ಮಾಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವತಿಯಿಂದ ಈ ಕಾರ್ಯ ಇವತ್ತು ಹಮ್ಮಿಕೊಳ್ಳಲಾಗಿತ್ತು. 

ಇಂದು ಶನಿವಾರ   ಬೆಳಗ್ಗೆ 7-30 ರಿಂದ ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಮುಜರಾಯಿ ಇಲಾಖೆಯ ಶ್ರೀ ಕೋದಂಡರಾಮ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ರಮವು ಕಾಂಗ್ರೆಸ್​ನ ಹಿರಿಯ ಮುಖಂಡ  ಕಿಮ್ಮನೆ ರತ್ನಾಕರ ನೇತೃತ್ವದಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸಾರ್ವಜನಿಕರ ಸಹಯೋಗದೊಂದಿಗೆ ಶ್ರೀ ಕೋದಂಡರಾಮ ಸ್ವಾಮಿ ದೇವಸ್ಥಾನದ ಆವರಣವನ್ನು ಕ್ಲೀನ್​ ಮಾಡಿದರು. 


Share This Article