ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸುಳಿವು ನೀಡಿದ ಡಿಕೆಶಿ| ಯಾವಾಗ ಗೊತ್ತಾ
Deputy CM DK Shivakumar said that preparations are being made to hold the taluk and zilla panchayat elections in February or March
![ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸುಳಿವು ನೀಡಿದ ಡಿಕೆಶಿ| ಯಾವಾಗ ಗೊತ್ತಾ](https://malenadutoday.com/uploads/images/202412/image_870x_674d436e73988.webp)
SHIVAMOGGA | MALENADUTODAY NEWS | ಮಲೆನಾಡು ಟುಡೆ |Dec 2, 2024
ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
2021ರಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯ ಸದಸ್ಯರ ಅವಧಿ ಮುಗಿದಿತ್ತು ಅದಾಗಿ ಮೂರುವರೆ ವರ್ಷ ಕಳೆದರೂ ಚುನಾವಣೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಸುಳಿವು ನೀಡಿರಲಿಲ್ಲ. ಮೀಸಲಾತಿ, ಪಂಚಾಯತಿ ಕ್ಷೇತ್ರಗಳ ಮರು ವಿಂಗಡಣೆ, ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗಕ್ಕೆ ಇದ್ದ ಅಧಿಕಾರವನ್ನು ಹಿಂಪಡೆದ ಬಗ್ಗೆ ಹೈಕೋರ್ಟ್ ನಲ್ಲಿ ಪ್ರಶ್ನಿಸಿರುವುದು ಸೇರಿ ವಿವಿಧ ಕಾರಣಗಳಿಂದ ಚುನಾವಣೆ ಮುಂದಕ್ಕೆ ಹೋಗುತ್ತಿತ್ತು. ಇದೀಗ ಫೆಬ್ರವರಿ ಮಾರ್ಚ್ ತಿಂಗಳಲ್ಲಿ ಚುಣಾವಣೆ ನಡೆಸುವ ಬಗ್ಗೆ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.
SUMMARTY| Deputy CM DK Shivakumar said that preparations are being made to hold the taluk and zilla panchayat elections in February or March.
KEY WORDS| Deputy CM DK Shivakumar, taluk and zilla panchayat elections, karnataka, political news,