ಆಧಾರ್ ಅಪ್ ಡೇಟ್ ಮಾಡಿಸಲು ಜಿಲ್ಲಾಧಿಕಾರಿ ಸೂಚನೆ | ಹೆಚ್ಚಿನ ವಿವರ ಇಲ್ಲಿದೆ
Deputy Commissioner instructs to update Aadhaar , ಆಧಾರ್ ಅಪ್‌ಡೇಟ್ ಮಾಡಲು ಸೂಚನೆ shimoganewslive, ಆಧಾರ್ ಅಪ್‌ಡೇಟ್ , ವೃದ್ದಾಪ್ಯ ಯೋಜನೆ, ವಿಧವಾ ಯೋಜನೆ, ಅಂಗವಿಕಲ ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆ, ಮೈತ್ರಿ ಯೋಜನೆ
SHIVAMOGGA | MALENADUTODAY NEWS | Sep 5, 2024
ಪಿಂಚಣಿ ಸಂದಾಯವಾಗದ ಫಲಾನುಭವಿಗಳು ಆಧಾರ್ ಅಪ್ ಡೇಟ್ ಮಾಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಈ ಬಗೆಗಿನ ವಿವರ ಹೀಗಿದೆ.
ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳಾದ ವೃದ್ದಾಪ್ಯ ಯೋಜನೆ, ವಿಧವಾ ಯೋಜನೆ, ಅಂಗವಿಕಲ ಯೋಜನೆ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆ, ಮೈತ್ರಿ ಯೋಜನೆಗಳ ಮಾಸಿಕ ಪಿಂಚಣಿಯನ್ನು ಫಲಾನುಭವಿಗಳಿಗೆ ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆ (ಡಿಬಿಟಿ) ಮೂಲಕ ಪಾವತಿಸಲಾಗುತ್ತಿದೆ.
ಈ ಪೈಕಿ ಆಧಾರ್ ಡೃಢಿಕರಣ ವಿಫಲವಾದ 2937 ಫಲಾನುಭವಿಗಳು ಮತ್ತು ಹೆಸರು ಹೊಂದಾಣಿಕೆ ಇರದ 21 ಫಲಾನುಭವಿಗಳಿಗೆ ಕಳೆದ ಮಾರ್ಚ್-2024 ರಿಂದ ಮಾಸಿಕ ಪಿಂಚಣಿ ಸಂದಾಯವಾಗಿರುವುದಿಲ್ಲ.
ಮಾಸಿಕ ಪಿಂಚಣಿ ಸಂದಾಯವಾಗದೇ ಇರುವ ಫಲಾನುಭವಿಗಳು ಕೂಡಲೇ ಮಂಜೂರಾತಿ ಆದೇಶ ಪತ್ರ, ಆಧಾರ್ ಕಾರ್ಡ್, ಪಾಸ್ ಪುಸ್ತಕ ಮತ್ತು ಎನ್.ಪಿ.ಸಿ.ಐ. ಮ್ಯಾಪಿಂಗ್ ಆಗಿರುವುದರ ಪ್ರತಿಯೊಂದಿಗೆ ಸಂಬಂಧಿಸಿದ ತಾಲ್ಲೂಕು ಕಛೇರಿ/ನಾಡ ಕಛೇರಿಗೆ ಭೇಟಿ ನೀಡಿ ಆಧಾರ್ ಅಪ್ ಡೇಟ್ ಮಾಡಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ