ಮಕ್ಕಳಿಗೆ ವರ್ಷಕ್ಕೆ 24 ಸಾವಿರ ಸ್ಕಾಲರ್‌ ಶಿಪ್‌ ಸುದ್ದಿ ಬಗ್ಗೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಎಚ್ಚರಿಕೆ | ಏನಿದು? ವಿವರ ಓದಿ

Deputy Commissioner's office warns about reports of 24,000 scholarships per year for children | What is this? Read details

ಮಕ್ಕಳಿಗೆ ವರ್ಷಕ್ಕೆ 24 ಸಾವಿರ ಸ್ಕಾಲರ್‌ ಶಿಪ್‌  ಸುದ್ದಿ ಬಗ್ಗೆ  ಜಿಲ್ಲಾಧಿಕಾರಿ ಕಾರ್ಯಾಲಯದಿಂದ  ಎಚ್ಚರಿಕೆ | ಏನಿದು? ವಿವರ ಓದಿ
Deputy Commissioners office , ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯ

SHIVAMOGGA | MALENADUTODAY NEWS 

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 19, 2024  

 

ಹೈಟೆಕ್‌ ಕಾಲದಲ್ಲಿ ನಾನಾ ಸುಳ್ಳು ಸುದ್ದಿಗಳನ್ನ ಹರಡಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಇದೀಗ ಇನ್ನೊಂದು ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದ್ದು, ಈ ಸಂಬಂಧ ಎಚ್ಚರಿಕೆ ವಹಿಸುವಂತೆ ಇಲಾಖೆ ಪ್ರಕಟಣೆಯನ್ನ ನೀಡಲಾಗಿದೆ. 

ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000/- ಸ್ಕಾಲರ್‌ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೆ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂದು ಅಧಿಕೃತ ಸಹಿ ಇಲ್ಲದ ಅರ್ಜಿಯು ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿದಾಡುತ್ತಿದೆ.

ಈ ಸುದ್ದಿಯು “ಸುಳ್ಳುಸುದ್ದಿ”ಯಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಅಡಿಯಲ್ಲಿ ನಿರ್ದಿಷ್ಟ ಮಾನದಂಡಗಳು ಅನ್ವಯವಾಗುವ ಮಕ್ಕಳಿಗೆ ಮಾತ್ರ ಸ್ಕಾಲರ್‌ಶಿಪ್ ಲಭಿಸುತ್ತದೆ  

ಮಕ್ಕಳ ಪಾಲನಾ ಸಂಸ್ಥೆಗಳಿಂದ (ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯ) ಹೊರಹೋಗಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವ ಮಕ್ಕಳು, ಇಬ್ಬರೂ ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದರೆ ಹಾಗೂ ವಿಸ್ತ್ರತ ಕುಟುಂಬದಲ್ಲಿ ಜೀವಿಸುತ್ತಿದ್ದರೆ, ಕಾರಾ ಗೃಹದಲ್ಲಿರುವ ಪೋಷಕರ ಮಕ್ಕಳು, ಕಾನೂನಿನೊಂದಿಗೆ ಸಂಘರ್ಷಕ್ಕೊಳಪಟ್ಟ ಮಕ್ಕಳು, ಪಿಎಂ ಕೇರ್ ಫಾರ್ ಚಿಲ್ಡ್ರನ್ ಯೋಜನೆಯಡಿ ಬರುವ ಮಕ್ಕಳು, ಪೋಷಕರು ಗಂಭೀರ ಸ್ವರೂಪದ ಕಾಯಿಲೆಯ (ಮಾರಣಾಂತಿಕ ಕಾಯಿಲೆ) ಸಂತ್ರಸ್ಥರ ಮಕ್ಕಳು, ಪೋಕ್ಸೋ ಸಂತ್ರಸ್ಥ ಮಕ್ಕಳು, ಬಾಲಸ್ವರಾಜ್ ಪೋರ್ಟಲ್‌ನಲ್ಲಿ ನೋಂದಾಯಿಸಿದ ಮಕ್ಕಳು, ಯಾವುದೇ ನೈಸರ್ಗಿಕ ವಿಕೋಪಕ್ಕೆ ಒಳಗಾದವರು, ಬಾಲ ಕಾರ್ಮಿಕರು, ಬಾಲ್ಯ ವಿವಾಹ ಸಂತ್ರಸ್ತ ಮಕ್ಕಳು, ಕಳ್ಳ ಸಾಗಾಣೆಗೊಳಗಾದ ಮಕ್ಕಳು, ಹೆಚ್‌ಐವಿ/ಏಡ್ಸ್ ಬಾಧಿತ (ಪೀಡಿತ) ಮಕ್ಕಳು, ದೈಹಿಕ ಅಂಗವಿಕಲತೆಯುಳ್ಳ ಮಕ್ಕಳು, ಅನಾಥ, ಕಾಣೆಯಾದ ಅಥವಾ ಓಡಿಹೋದ ಮಕ್ಕಳು, ಬಾಲ ಬಿಕ್ಷುಕರು ಅಥವಾ ಬೀದಿಬದಿ ಮಕ್ಕಳು, ಚಿತ್ರಹಿಂಸೆ ಅಥವಾ ನಿಂದನೆ ಅಥವಾ ಬೆಂಬಲ ಮತ್ತು ಪುನರ್ವಸತಿ ಅಗತ್ಯವಿರುವ ಶೋಷಿತ ಮಕ್ಕಳು, ನಿರ್ಗತಿಕರಾಗುವುದು. ಸಂಕಷ್ಟಕ್ಕೆ ಈಡಾಗುವ ಸಂಭವವಿರುವ ಕುಟುಂಬದ ತಾಯಿ ಕುಟುಂಬದಿಂದ ಪರಿತ್ಯಜಿಸಲ್ಪಟ್ಟಿದ್ದರೆ ಅಥವಾ ವಿಧವೆ. ವಿಚ್ಛೇದಿತೆ ಮಗು ಜೈವಿಕ ಕುಟುಂಬದಲ್ಲೇ (ವಿಸ್ತ್ರತ ಕುಟುಂಬ ಹಾಗೂ ರಕ್ತ ಸಂಬಂಧ ಒಳಗೊಂಡಂತೆ) ಮುಂದುವರೆಯುವ ಮಕ್ಕಳಿಗೆ ಈ ಯೋಜನೆ ಲಬಿಸುತ್ತದೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲ್ಕೋಳ ಶಿವಮೊಗ್ಗ, ದೂ. ಸಂಖ್ಯೆ:08182-295709 ಸಂಪರ್ಕಿಸಿ ಎಂದು ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಪ್ರಕಟಣೆ ತಿಳಿಸಿದ್ದಾರೆ.

ಬಂಧಿ ಮಿತ್ರ ಡಾ.ಪಿ ರಂಗನಾಥ್‌ IS BACK | ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾಗಿ ಅಧಿಕಾರ ಸ್ವೀಕಾರ | ಬದಲಾವಣೆಗೆ ಕಾರಣ ಗೊತ್ತಾ?

ಅಪರಾಧಿಗಳ ಚಿನ್ನದಗಣಿಗಳಿಗೆ ಗಡಿಪಾರಿನ ಶಿಕ್ಷೆ | ಪೊಲೀಸ್‌ ಇಲಾಖೆ ಮುಟ್ಟಿದವರಿಗೆ ಶಾಕ್‌ | ಮೊದಲೇ ಹೇಳಿತ್ತು ಮಲೆನಾಡು ಟುಡೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ