ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ | ಸಿಎಸ್ ಷಡಾಕ್ಷರಿ ಮಹತ್ವದ ಸುದ್ದಿಗೋಷ್ಟಿ
Elections for the State Government Employees Association, state president, vice president, general secretary, treasurer, various office bearers will be held tomorrow, Cubbon Park, Bengaluru, cs shadakshari
SHIVAMOGGA | MALENADUTODAY NEWS | ಮಲೆನಾಡು ಟುಡೆ Dec 26, 2024
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ, ಉಪಾಧ್ಯಕ್ಷ ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸೇರಿ ಸಂಘದ ವಿವಿಧ ಪದಾಧಿಕಾರಿಗಳ ಆಯ್ಕೆಗೆ ನಾಳೆ ಶುಕ್ರವಾರ, ಅಂದರೆ ಡಿಸೆಂಬರ್ 27 ರಂದು ಬೆಂಗಳೂರಿನ ಕಬ್ಬನ್‌ಪಾರ್ಕ್ ಅವರಣದಲ್ಲಿರುವ ನೌಕರರ ಸಂಘದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸೋಲಿಸುವ ಹುನ್ನಾರ ಬಿಟ್ಟು ತಮ್ಮನ್ನು ಆಯ್ಕೆ ಮಾಡಲು ಸಹಾಕಾರ ನೀಡುವಂತೆ ಮನವಿ ಮಾಡಿದ್ದಾರೆ.
5.25 ಲಕ್ಷ ಸರ್ಕಾರಿ ನೌಕರರನ್ನು ಹೊಂದಿರುವ ಬೃಹತ್ ಸಂಘ ಇದಾಗಿದ್ದು, ರಾಜಕೀಯ ರಹಿತವಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಘಕ್ಕೆ ಈ ಬಾರಿ ರಾಜಕೀಯ ವ್ಯಕ್ತಿಗಳು ಪ್ರವೇಶಿಸಿರುವುದು ಬೇಸರದ ಸಂಗತಿ ಎಂದರು.
ಇದೇ ವೇಳೆ ಚುನಾವಣೆಯ ಮಾಹಿತಿ ನೀಡಿದ ಅವರು, ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾ ಕಾರ್ಯದರ್ಶಿ, ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿ 971 ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ಇವರೆಲ್ಲರೂ ನನ್ನನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.
SUMMARY | Elections for the State Government Employees Association, state president, vice president, general secretary, treasurer and various office bearers will be held tomorrow, Cubbon Park, Bengaluru.
KEY WORDS | Elections for the State Government Employees Association, state president, vice president, general secretary, treasurer, various office bearers will be held tomorrow, Cubbon Park, Bengaluru, cs shadakshari