ಮೈಕ್ರೋಫೈನಾನ್ಸ್ ಕಿರುಕುಳದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು? ಇಲ್ಲಿದೆ ಕಾನೂನು ಮಾಹಿತಿ
What are the punishments given by the law to the guilty by promulgating a government ordinance to control harassment of microfinance institutions?

SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 14, 2025
ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಸರ್ಕಾರ ಜಾರಿಗೊಳಿಸಿದೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾದ ಹಿನ್ನಲೆ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳವನ್ನು ತಪ್ಪಿಸುವ ಉದ್ದೇಶದಿಂದ ಕಠಿಣ ಕಾನೂನುಗಳನ್ನು ಜಾರಿಗೊಳಿಸಲು ತೀರ್ಮಾನಿತ್ತು.
ಹಾಗೆಯೇ ಅದರ ರಿಪೋರ್ಟ್‌ನ್ನು ರಾಜ್ಯ ಪಾಲರ ಅಂಕಿತಕ್ಕಾಗಿ ಕಳುಹಿಸಿತ್ತು. ಆದರೆ ರಾಜ್ಯಪಾಲರು ಸರ್ಕಾರ ಕಳುಹಿಸಿದ್ದ ರಿಪೋರ್ಟ್‌ನ್ನು ಪರಿಶೀಲಿಸಿ ಆರಿಪೋರ್ಟ್‌ನಲ್ಲಿ ಸಾಕಷ್ಟು ತೊಡಕುಗಳಿವೆ ಹಾಗಾಗಿ ಅದನ್ನು ಸರಿಪಡಿಸಿ ತರುವಂತೆ ಆ ರಿಪೋರ್ಟ್‌ನ್ನು ಹಿಂದಿರುಗಿಸಿದ್ದರು.
ನಂತರ ರಾಜ್ಯಸರ್ಕಾರ ಕೆಲವು ಬದಲಾವಣೆಗಳನ್ನು ಮಾಡಿ ಅದನ್ನು ಪುನ: ರಾಜ್ಯಪಾಲರ ಕಚೇರಿಗೆ ಕಳುಹಿಸಿತ್ತು. ಆನಂತರ ರಾಜ್ಯಪಾಲರು ಫೆಬ್ರವರಿ 12 ರಂದು ಆ ರಿಪೋರ್ಟ್‌ನ್ನು ಪರಿಶೀಲಿಸಿ ಅಂಕಿತವನ್ನು ಹಾಕಿದ್ದರು. ಅದರಲ್ಲಿರುವ ಮುಖ್ಯ ಅಂಶಗಳನ್ನು ನೋಡುವುದಾದರೆ
ಸರ್ಕಾರ ಜಾರಿಗೊಳಿಸಿರುವ ಆದೇಶದ ಮುಖ್ಯಾಂಶಗಳು ಹೀಗಿವೆ
- ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು.
- ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು.
- ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ
- ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ.
- ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ ಎಂಬ ಮಾಹಿತಿ ಇದೆ.
ಸಾಲ ನೀಡುವಾಗು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳೇನು
ಮೈಕ್ರೋಫೈನಾನ್ಸ್ ಸಂಸ್ಥೆಗಳು ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯವಾಗಿದೆ.
ಈ ಸಂಸ್ಥೆಗಳು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ ಹಾಗೂ ಸುಸ್ತಿ ಸಾಲಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು.
ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು.
ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಲ್ಲಿಸದಿದ್ದರೆ 6 ತಿಂಗಳ ಕಾರಗೃಹವಾಸ ಅಥವಾ 10 ಸಾವರಿರೂ ವರೆಗೆ ದಂಡ ಅಥವಾ ಎರಡೂ ಶಿಕ್ಷೆಗೆ ಗುರಿಯಾಗುತ್ತಾರೆ.
ವಿವಾದಗಳನ್ನು ಇತ್ಯರ್ಥಗಳನ್ನು ಒಂಬುಡ್ಸ್‍ಮನ್‍ಗಳನ್ನು ಸರ್ಕಾರ ಅಧಿಸೂಚನೆ ಮೂಲಕ ನೇಮಕ ಮಾಡುವ ಅಧಿಕಾರ ಹೊಂದಿರುತ್ತದೆ.
ಬಲವಂತವಾಗಿ ಸಾಲ ವಸೂಲಾತಿ ಮಾಡುವ ಆರೋಪಿಗಳಿಗೆ ಕಾನೂನು ನೀಡುವ ಶಿಕ್ಷೆಗಳೆನು
- ಬಲವಂತದ ವಸೂಲಾತಿಗಳನ್ನು ಕೈಗೊಳ್ಳುವ ವ್ಯಕ್ತಿಯು ವಿಚಾರಣೆಗೆ ಒಳಪಡುತ್ತಾನೆ,
- ಹತ್ತು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಗೃಹವಾಸ ಶಿಕ್ಷೆ ಹಾಗೂ 5 ಲಕ್ಷ ರೂ ವರೆಗೆ ವಿಧಿಸಬಹುದಾದ ಜುಲ್ಮಾನೆಗೆ ಒಳಪಡುತ್ತಾನೆ.
- ಈ ಅಪರಾಧಗಳು ಸಂಜ್ಞೆಯ ಹಾಗೂ ಜಾಮೀನು ರಹಿತ ಪ್ರಕರಣಗಳಾಗಿರುತ್ತವೆ. ಯಾವುದೇ ಪೊಲೀಸ್ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲು ನಿರಾಕರಿಸಬಾರದು.
- ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್‍ಪಿ) ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯು ಸ್ವತಃ (ಸುಮೊಟೊ) ಪ್ರಕರಣ ದಾಖಲಿಸಬಹುದು.
- ಸರ್ಕಾರವು ಈ ಅಧ್ಯಾದೇಶದ ಅನುಷ್ಠಾನಕ್ಕೆ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.
- ಈ ಆದೇಶದಿಂದ ಆರ್.ಬಿ.ಐ ಮತ್ತು ಕೇಂದ್ರ / ರಾಜ್ಯ ಸರ್ಕಾರಗಳಿಂದ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚಿಸಲು ಹಾಗೂ ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ನೀಡುತ್ತದೆ.
SUMMARY | What are the punishments given by the law to the guilty by promulgating a government ordinance to control harassment of microfinance institutions?
KEYWORDS | microfinance, government, punishments, law,