ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಗೆ ಗುಡ್ ನ್ಯೂಸ್ ಕೊಟ್ಟ ಹೈಕೋರ್ಟ್
High Court has quashed the FIR registered at Tilak Nagar police station against BJP state president BY Vijayendra in the electoral bond case.
SHIVAMOGGA | MALENADUTODAY NEWS | ಮಲೆನಾಡು ಟುಡೆ Dec 18, 2024
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರವರ ವಿರುದ್ಧ ದಾಖಲಾಗಿದ್ದ FIR ಒಂದನ್ನು ಹೈಕೋರ್ಟ್ ರದ್ದು ಮಾಡಿದೆ. ಜಾರಿನಿರ್ದೇಶನಾಲಯದಿಂದ ತನಿಖೆ ನಡೆಸುವುದಾಗಿ ಬೆದರಿಕೆವೊಡ್ಡಿ ಖಾಸಗಿ ಕಂಪನಿಗಳಿಂದ ಚುನಾವಣಾ ಬಾಂಡ್ ಹೆಸರಿನಲ್ಲಿ ಕೋಟ್ಯಂತರ ಹಣ ಸುಲಿಗೆ ಮಾಡಿದ ಆರೋಪ ಸಂಬಂಧ ಎಫ್‌ಐಆರ್ ದಾಖಲಾಗಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಎಫ್‌ಐಆರ್ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಬಿ.ವೈ. ವಿಜಯೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ. ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲು ವಿರುದ್ಧದ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸಿ ಇದೇ ನ್ಯಾಯಪೀಠ ಇತ್ತೀಚೆಗೆ ಆದೇಶಿಸಿತ್ತು.
SUMMARY | The High Court has quashed the FIR registered at Tilak Nagar police station against BJP state president BY Vijayendra in the electoral bond case.
KEY WORDS | High Court has quashed the FIR, Tilak Nagar police station, BJP state president BY Vijayendra , electoral bond case.