ಶಿವಮೊಗ್ಗ GTTC ಯಲ್ಲಿ ಉದ್ಯೋಗವಕಾಶ! ಯಾರಿಗೆಲ್ಲಾ ಇದೆ ಅವಕಾಶ! ಇಲ್ಲಿದೆ ವಿವರ

Job Opportunities in Shimoga GTTC! Who all have a chance! Here's the details

ಶಿವಮೊಗ್ಗ GTTC ಯಲ್ಲಿ ಉದ್ಯೋಗವಕಾಶ! ಯಾರಿಗೆಲ್ಲಾ ಇದೆ ಅವಕಾಶ! ಇಲ್ಲಿದೆ ವಿವರ
Job Opportunities in Shimoga GTTC! Who all have a chance! Here's the details

SHIVAMOGGA  |  Jan 25, 2024  | Job Opportunities in Shimoga GTTC  |  ಶಿವಮೊಗ್ಗ: ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (Government Tool Room and Training Centre (GTTC), )ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

ವಿದ್ಯಾರ್ಹತೆ

ಬಿ.ಇ., ಎಂ.ಟೆಕ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಟೆಲಿ ಕಮ್ಯುನಿಕೇಷನ್ ವಿಭಾಗದಲ್ಲಿ ಪದವಿ ಪಡೆದಿರುವ ಹಾಗೂ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು. 

ಪೂರ್ತಿ ವಿವರ

ಅಭ್ಯರ್ಥಿ ವಯೋಮಿತಿ ಗರಿಷ್ಠ 38 ವರ್ಷ ಇರಬೇಕು. ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಕೇಂದ್ರದ ಪರಿಮಿತಿಗೆ ಒಳಪಟ್ಟಿರುತ್ತದೆ. ಅರ್ಜಿಯನ್ನು ಸಲ್ಲಿಸಲು ಜ.27 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂಬರ್‌ಸಿಎ.38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ : 08182-246054, 94483-07027, 99022- 32839 ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.