Big stroke \ ಚುನಾವಣಾ ರಾಜಕೀಯ ನಿವೃತ್ತಿ‌ ಘೋಷಿಸಿದ ಮಾಜಿ‌ ಸಚಿವ ಕೆ.ಎಸ್ ಈಶ್ವರಪ್ಪ

Big stroke \ ಚುನಾವಣಾ ರಾಜಕೀಯ ನಿವೃತ್ತಿ‌ ಘೋಷಿಸಿದ ಮಾಜಿ‌ ಸಚಿವ ಕೆ.ಎಸ್ ಈಶ್ವರಪ್ಪ

ರಾಜಕೀಯ ದಿಡೀರ್ ಬೆಳವಣಿಗೆ ಒಂದರಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾರವರಿಗೆ ಪತ್ರ ಬರೆದಿರುವ ಕೆಎಸ್ ಈಶ್ವರಪ್ಪನವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ತೀರ್ಮಾನ ತಿಳಿಸಿದ್ದಾರೆ

ಪತ್ರದಲ್ಲಿ ಇರೋದೇನು

ಈಶ್ವರಪ್ಪನವರು‌ ತಮ್ಮ ಪತ್ರದಲ್ಲಿ ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ,

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್‌ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ