Shivamogga | Feb 3, 2024 | ಕುವೆಂಪು ವಿಶ್ವ ವಿದ್ಯಾಲಯ ಶೈಕ್ಷಣಿಕ ಅವಧಿ ಹಾಗೂ ಪರೀಕ್ಷೆ ಮುಂದೂಡಿಕೆ ಬಗ್ಗೆ ಒತ್ತಾಯ ಕೇಳಿಬಂದಿತ್ತು. ಕುವೆಂಪು ವಿಶ್ವ ವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜು ಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾರ್ಥಿ ಗಳಿಗೆ ಪಾಠ ಪ್ರವಚನಗಳು ಸರಿಯಾಗಿ ನಡೆದಿರುವುದಿಲ್ಲ. ಈ ಹಿನ್ನೆಲೆಯ ಶೈಕ್ಷಣಿಕ ಅವಧಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆ ಸಹ ಮನವಿ ಮಾಡಿತ್ತು.
ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ನಡೆಯದೇ ಇರುವುದನ್ನು ಗಮನದಲ್ಲಿಟ್ಟುಕೊಂಡು ಅಕಾಡೆಮಿಕ್ ಕ್ಯಾಲೆಂಡರ್ ಅನ್ನು ಫೆಬ್ರವರಿ ತಿಂಗಳ ಅಂತಿಮದಿನದ ವರೆಗೆ ಮಾರ್ಪಡಿಸಬೇಕು
ಅಥವಾ ವಿದ್ಯಾರ್ಥಿಗಳ ಹಿತಾ ದೃಷ್ಠಿ ಇಂದ ಪರೀಕ್ಷೆಯನ್ನು ಮುಂದೂಡಬೇಕೆಂದು ಎನ್ ಎಸ್ ಯು ಐ ಪ್ರತಿಭಟನೆ ಸಹ ನಡೆಸಿತ್ತು. ಇದೀಗ ಕುವೆಂಪು ವಿಶ್ವ ವಿದ್ಯಾಲಯ ಒತ್ತಾಯಕ್ಕೆ ಮಣಿದು ವಿದ್ಯಾರ್ಥಿಗಳ ಹಿತದೃಷ್ಠಿಯಿಂ ಅಕಾಡಿಮಿಕ್ ಕ್ಯಾಲೆಂಡರ್ ಹಾಗೂ ಪರೀಕ್ಷೆ ಎರಡನ್ನೂ ಮುಂದೂಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಸಂಬಂಧ ಪ್ರಕಟಣೆಯನ್ನ ಸಹ ಹೊರಡಿಸಿದೆ.
