madhu bangarappa | ತಮ್ಮ ತಂದೆ ಓದಿದ ಸರ್ಕಾರಿ ಶಾಲೆಗೆ 10 ಲಕ್ಷ ದೇಣಿಗೆ ಕೊಟ್ಟ ಮಧು ಬಂಗಾರಪ್ಪ | ಕುಬಟೂರಲ್ಲಿ ಹೇಳಿದ್ದೇನು?

Madhu Bangarappa donates Rs 10 lakh to govt school | ಕುಬಟೂರು ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಮಧು ಬಂಗಾರಪ್ಪ ಆ ಬಳಿಕ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

madhu bangarappa | ತಮ್ಮ ತಂದೆ ಓದಿದ ಸರ್ಕಾರಿ ಶಾಲೆಗೆ 10 ಲಕ್ಷ ದೇಣಿಗೆ ಕೊಟ್ಟ ಮಧು ಬಂಗಾರಪ್ಪ | ಕುಬಟೂರಲ್ಲಿ ಹೇಳಿದ್ದೇನು?
ನಮ್ಮ ಶಾಲೆ ನಮ್ಮ ಜವಾಬ್ದಾರಿ , Madhu Bangarappa, ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಇವತ್ತು ಜಿಲ್ಲಾ ಪ್ರವಾಸದಲ್ಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ ವಿಶೇಷವಾಗಿ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಬಟೂರು ಕೆರೆಗೆ ಅವರು ಕುಟುಂಬ ಸಮೇತರಾಗಿ ತೆರಳಿ ಬಾಗಿನ ಅರ್ಪಿಸಿದರು. 

 

ಆ ಬಳಿಕ  ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಕುಬಟೂರು ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಸ್ವಗ್ರಾಮದ ಶಾಲೆಗೆ 10 ಲಕ್ಷ ರೂಪಾಯಿ ದೇಣಿಗೆಯನ್ನ ನೀಡಿದರು. 

 

ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು ಎಂದರು

 

ತಮ್ಮ ತಂದೆಯವರಾದ ಎಸ್.ಬಂಗಾರಪ್ಪ (S. Bangarappa )ಅವರ ಭವಿಷ್ಯ ರೂಪಿಸಿದ್ದು, ಇದೇ ಕುಬಟೂರು ಸರ್ಕಾರಿ ಶಾಲೆ ಎಂದ ಸಚಿವರು, ತಮಗೆ ಸರ್ಕಾರಿ ಶಾಲೆಯಲ್ಲಿ ಓದುವ ಸೌಭಾಗ್ಯ ಸಿಗದಿರುವ ಕುರಿತು ಬೇಸರವಿದೆ ಎಂದರು. 

 

ಅಕ್ಷರ ಕಲಿಸಿದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸರ್ಕಾರದ ಜತೆಗೆ ಎಲ್ಲರೂ ಕೈಜೋಡಿಸಬೇಕು. ಇದರಿಂದ, ಸರ್ಕಾರಿ ಶಾಲೆಗಳ ಅಸ್ಥಿತ್ವ ಸುಧಾರಣೆ ಕಾಣಲು ಸಾಧ್ಯ ಎಂದರು 

 

 




 



ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ