ಭಾರತದಲ್ಲಿ ಮೊದಲ ಬಾರಿಗೆ ರಾಜ್ಯದ ಪಿಯುಸಿ ಕಾಲೇಜಿನಲ್ಲಿ ಎರಡನೇ ಬಾರಿ ಪೂರಕ ಪರೀಕ್ಷೆ ಬರೆಯಲು ಅವಕಾಶ,. ಎನ್.ಇ ಪಿ ಬದಲು ಎಸ್ ಇ ಪಿ ಜಾರಿ, ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವರು ಹೇಳಿದ್ದೇನು ?

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ

ಭಾರತದಲ್ಲಿ ಮೊದಲ ಬಾರಿಗೆ ರಾಜ್ಯದ ಪಿಯುಸಿ ಕಾಲೇಜಿನಲ್ಲಿ ಎರಡನೇ ಬಾರಿ ಪೂರಕ ಪರೀಕ್ಷೆ ಬರೆಯಲು ಅವಕಾಶ,. ಎನ್.ಇ ಪಿ ಬದಲು ಎಸ್ ಇ ಪಿ ಜಾರಿ, ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವರು ಹೇಳಿದ್ದೇನು ?

ಶಿವಮೊಗ್ಗದಲ್ಲಿ ಸ್ವಾತಂತ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ.ನಡೆಸಿ ಹಲವು ಮಹತ್ವದ ಸಂಗತಿಗಳನ್ನು ತಿಳಿಸಿದರು. ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜಾರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೊಸ ಸರ್ಕಾರ ಬಂದಾಗ ಆಸೆ ಹಾಗೂ ಕಾರ್ಯಕ್ರಮದ ನಿರೀಕ್ಷೆ ಇರುತ್ತದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಶೀಘ್ರವಾಗಿ ಈಡೇರಿಸುತ್ತಿದ್ದೇವೆ. ಆಗ ಮಾತ್ರ ಜನರು ನಮ್ಮ ಮೇಲಿಟ್ಟಿರುವ ನಂಬಿಕೆಗೆ ಬೆಲೆ ಬರುತ್ತದೆ.

 ನಮ್ಮ ತಂದೆ ಬಂಗಾರಪ್ಪ ನಿಂತು ಧ್ವಜಾರೋಹಣ ಮಾಡಿದ ಜಾಗದಲ್ಲಿ ನಿಂತು ನಾನೂ ಧ್ವಜಾರೋಹಣ ನೆರವೇರಿಸಿದ್ದು ಸಂತಸ ತಂದಿದೆ. 5 ಗ್ಯಾರಂಟಿ ಪೈಕಿ ನನಗೆ ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮಿ ಯೋಜನೆ ಹೆಚ್ಚು ಹತ್ತಿರವಾಗಿದೆ. ಹಾಗೆಯೇ ಶಕ್ತಿ ಮತ್ತು  ನಿರುದ್ಯೋಗ ಭತ್ಯೆ ಸಹ ಹೆಚ್ಚು ಅರ್ಥಪೂರ್ಣವಾಗಿದೆ. ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಗಲಿದೆ. ಕೋರ್ಟ್ ವಿಚಾರ ಬಂದಾಗ ಅಧಿಕಾರಿಗಳು ನಿಭಾಯಿಸುತ್ತಾರೆ. ಈಗಾಗಲೇ ಈ ನಿಟ್ಟಿನಲ್ಲಿ ಪ್ರಯತ್ನ ಆರಂಭವಾಗಿದ್ದು ಸಭೆ ನಡೆಸಲಾಗುತ್ತಿದೆ. ಇದೇ 18 ರಂದು ಮಂಡ್ಯದಲ್ಲಿ ವಾರಕ್ಕೆ ಎರಡು ಸಲ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಇದರಿಂದ 60 ಲಕ್ಷ ಮಕ್ಕಳಿಗೆ ಅನುಕೂಲ ಆಗಲಿದೆ. ದೇಶದಲ್ಲಿ ಮೊದಲ ಬಾರಿಗೆ ಪಿಯುಸಿ ಪೂರಕ ಪರೀಕ್ಷೆ ಬರೆಯಲು ಎರಡನೇ ಬಾರಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳನ್ನ ಫೇಲ್ ಮಾಡಿದರೆ ಒಂದು ವರ್ಷ ಕಾಯಬೇಕು. ಹಾಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

 ಪಠ್ಯ ಪುಸ್ತಕ ಬದಲಾಗಿದೆ. ಎನ್ ಇಪಿ ಬದಲು ಎಸ್ ಇಪಿ ಜಾರಿಗೊಳಿಸಲಾಗುತ್ತದೆ. ಪಠ್ಯ ಪುಸ್ತಕದಲ್ಲೂ ಕೆಲ ಬದಲಾವಣೆ ತರಬೇಕಿದೆ. ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದೆ. ಇದನ್ನು ಶಿಕ್ಷಕರ ದಿನಾಚರಣೆ ದಿನ ರಿ ಲಾಂಚ್ ಮಾಡಲಾಗುವುದು. ಈಗಾಗಲೇ 3.40 ಕೋಟಿ ಜನ ಇದಕ್ಕೆ ಸದಸ್ಯರಾಗಿದ್ದಾರೆ. ಮುಂದಿನ ದಿನಗಳಲ್ಲಿ ಡಿಜಿಟಲ್ ಲೈಬ್ರರಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

 ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಚ್ಚಿನ ಬೇಡಿಕೆಯಿದ್ದು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಆರಂಭಿಸಲಾಗುವುದು. ಅನುದಾನ ಪಡೆಯದ 1600 ಶಾಲೆಗಳಿವೆ ಕೆಲವೊಂದು ನಿಯಮಗಳನ್ನು ಸಡಿಲಗೊಳಿಸಲಾಗುತ್ತಿದೆ. 6 ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರೀಯಿಸಿ ಮಾತನಾಡಿದ ಮಧು ಬಂಗಾರಪ್ಪ ಅವರಿಗೆ ಬಸ್ ನಿಲ್ದಾಣದಲ್ಲಿ ಗಿಣಿ ಶಾಸ್ತ್ರ ಹೇಳಲು ಹೇಳಿ.ಎಂದು ವ್ಯಂಗ್ಯವಾಡಿದ್ದಾರೆ.

 ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿರುವ ಬಗ್ಗೆ ಸಾಕ್ಷ್ಯಾಧಾರ ನೀಡಲಿ. ಸುಮ್ಮನೆ ಆರೋಪ ಮಾಡುವುದು ಬೇಡ. ಸಿಎಂ ಸಹ ಇದನ್ನೇ ಹೇಳಿದ್ದಾರೆ. ಅಘೋಷಿತ ವಿದ್ಯುತ್ ಕಡಿತದ ಬಗ್ಗೆ ಸಾಕಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಲ ವಿದ್ಯುತ್ ಕೇಂದ್ರಗಳಲ್ಲಿ ನೀರಿನ ಕೊರತೆ ಇದೆ. ಹಾಗಾಗಿ ಕೆಲವೆಡೆ ವಿದ್ಯುತ್‌ ಕಡಿತವಾಗುತ್ತಿದೆ.