ಎಚ್ಚರ | ಬೀಸಲಿದೆ ದಂಡಿಗಾಳಿ | ಚಳಿ ಮರಗಟ್ಟಿಸಲಿದೆ | ಹವಾಮಾನ ಇಲಾಖೆ ಮುನ್ಸೂಚನೆ
Meteorological Department has warned of cold wave, Shivamogga,
SHIVAMOGGA | MALENADUTODAY NEWS | ಮಲೆನಾಡು ಟುಡೆ Dec 18, 2024
ಎಲ್ಲೆಡೆ ಚಳಿ ಜೋರಾಗಿದೆ. ಈ ನಡುವೆ ಹವಾಮಾನ ಇಲಾಖೆ ರಾಜ್ಯದಲ್ಲಿ ದಂಡಿ ಗಾಳಿ ಬೀಸುವ ಎಚ್ಚರಿಕೆಯನ್ನ ನೀಡಿದೆ. ವಿಪರೀತ ಶೀತ ಅಲೆಗಳು ಬೀಸುವ ಸಾಧ್ಯತೆ ಇದ್ದು, ತಾಪಮಾನದಲ್ಲಿ ಗಮನಾರ್ಹ ಇಳಿಕೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಈ ಸಂಬಂಧ ವಿಜಯಪುರ, ಕಲಬುರಗಿ ಮತ್ತು ಬೀದರ್‌ನಲ್ಲಿ ರೆಡ್ ಅಲರ್ಟ್ ಘೋಷಿಸಲು ಹವಾಮಾನ ಇಲಾಖೆ ಮುಂದಾಗಿದೆ. ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 21 ರ ನಂತರ ಮಳೆಯಾಗುವ ಮುನ್ಸೂಚನೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗದಲ್ಲಿಯು ಶೀತಗಾಳಿಯ ಅಬ್ಬರ ಇರಲಿದ್ದು ಇವತ್ತು ಶಿವಮೊಗ್ಗದಲ್ಲಿ ಕನಿಷ್ಟ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಗರಿಷ್ಟ 28 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆಯ ಆಪ್‌ನಲ್ಲಿ ತಿಳಿಸಲಾಗಿದೆ.
SUMMARY | Meteorological Department has warned of cold wave in many districts of the state, including Shivamogga.
KEY WORDS |Meteorological Department has warned of cold wave, Shivamogga,