ನಗರ ಪೊಲೀಸ್ ಸ್ಟೇಷನ್ ಲಿಮಿಟ್ಸ್​ನಲ್ಲಿ 24 ಗಂಟೆಯೊಳಗೆ ಮೂವರು ಅರೆಸ್ಟ್ ! ಕಾರಣವೇನು ಓದಿ

Nagar police station police have arrested the accused in the case of theft in Hosanagar

ನಗರ ಪೊಲೀಸ್ ಸ್ಟೇಷನ್ ಲಿಮಿಟ್ಸ್​ನಲ್ಲಿ 24 ಗಂಟೆಯೊಳಗೆ ಮೂವರು ಅರೆಸ್ಟ್ ! ಕಾರಣವೇನು ಓದಿ
Nagar police station

Shivamogga | Feb 3, 2024 |  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಗರ ಪೊಲೀಸ್ ಸ್ಟೇಷನ್ ಲಿಮಿಟ್ಸ್​ ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. 

ನಗರ ಪೊಲೀಸ್ ಸ್ಟೇಷನ್

ಮನೆಗೆ ನುಗ್ಗಿ 4.65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೂಲಿಗೇರಿ ನಿವಾಸಿಗಳಾದ ಸುಹಾನ್ (21), ಅಶೋಕ (24), ಗಣೇಶ (30) ಬಂಧಿತ ಆರೋಪಿಗಳು. ನೂಲಿಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದನ್ನು ಗಮನಿಸಿ ಕಳೆದ ಸೋಮವಾರ ರಾತ್ರಿ ಮನೆಯ ಹೆಂಚು ಕಿತ್ತು ಒಳನುಗ್ಗಿದ ಕಳ್ಳರು ಬೀರುವಿನ ಬೀಗ ಒಡೆದು ಗ್ರಾಂ ತೂಕದ ಚಿನ್ನಾಭರಣ ದೋಚಿದ್ದರು. 

ರಾಜಮ್ಮ ಮನೆಗೆ ವಾಪಾಸಾಗಿ ನೋಡುತ್ತಿದ್ದಂತೆ ಕಳ್ಳತನ ಆಗಿದ್ದು ತಿಳಿದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಡಿವೈಎಸ್ಪಿ ಗಜಾನನ ವಿ ಸುತಾರ, ಸಿಪಿಐ ಗುರಣ್ಣ ಎಸ್.ಹೆಬ್ಬಾಳ ಮತ್ತು ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರ ಪಿಎಸ್‌ಐ ಪಿ.ಎಸ್.ರಮೇಶ್ ನೇತೃತ್ವದಲ್ಲಿ ಪೊಲೀಸರ ತಂಡ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ವಶಕ್ಕೆ  ಪಡೆದಿದ್ದಾರೆ. 

ಅಲ್ಲದೆ ಬಂಧಿತರಿಂದ ಚಿನ್ನಾಭರಣ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕಾರ್ಯಾಚರಣೆಯಲ್ಲಿ ಎಂ.ಜಿ.ಮಂಜುನಾಥ, ವೆಂಕಟೇಶ್, ಪ್ರವೀಣ್‌ಕುಮಾರ್, ಕಿರಣ್‌ಕುಮಾರ್, ವಿಶ್ವನಾಥ್, ಶಾಂತಪ್ಪ ಭಾಗವಹಿಸಿದ್ದರು. ಡಿವೈಎಸ್ಪಿ ಗಜಾನನ ವಿ.ಸುತಾರ ನಗರ ಠಾಣೆಗೆ ಆಗಮಿಸಿ ಪೊಲೀಸರನ್ನು ಅಭಿನಂದಿಸಿದ್ದಾರೆ.