ಹೊಸ ವರ್ಷದಲ್ಲಿ ಜೋಗ ನೋಡಲು ಅವಕಾಶ | ಇಲ್ಲಿದೆ ವಿವರ
Opportunity to view Jog Falls, opportunity to view waterfalls at the main road view point, Yatri Niwas, Rani Falls, Mumbai Bungalow, Monsoon Rain Point,
SHIVAMOGGA | MALENADUTODAY NEWS | ಮಲೆನಾಡು ಟುಡೆ Dec 30, 2024
ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಪ್ರವಾಸಿಗರು ಜೋಗಕ್ಕೆ ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಭಾನುವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಆದ್ದರಿಂದ ಜನವರಿ 1ರಿಂದ ಮಾರ್ಚ್ 15 ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಈಚೆಗೆ ಆದೇಶ ಹೊರಡಿಸಿದ್ದರು. ಇದೀಗ ಪ್ರವಾಸಿಗರಿಗಾಗಿ ಪ್ರಮುಖ ಸ್ಥಳಗಳಲ್ಲಿ ಜೋಗ ವಿಕ್ಷಣೆಗೆ ಅವಕಾಶಕಲ್ಪಿಸಲಾಗಿದೆ.
SUMMARY | Opportunity to view Jog Falls, opportunity to view waterfalls at the main road view point, Yatri Niwas, Rani Falls, Mumbai Bungalow, Monsoon Rain Point
KEY WORDS | Opportunity to view Jog Falls, opportunity to view waterfalls at the main road view point, Yatri Niwas, Rani Falls, Mumbai Bungalow, Monsoon Rain Point,