Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |

13

SHIVAMOGGA | MALENADUTODAY NEWS | Aug 19, 2024  ಮಲೆನಾಡು ಟುಡೆ   

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್  ಕಾರ್ಯಕರ್ತರು ನಿನ್ನೆಯು ಪ್ರತಿಭಟನೆ ಯನ್ನ ಮುಂದುವರಿಸಿದ್ದಾರೆ. ಅದರಲ್ಲಿಯು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ  ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.ಈ ವೇಳೆ ಅವರನ್ನ ಪೊಲೀಸರು ವಶಕ್ಕೆ ಪಡೆದರು. 

- Advertisement -

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಪಿ.ನಾಗರಾಜಗೌಡ ಹಾಗೂ ನಗರದ ಮಹದೇವಪ್ಪ ನೇತೃತ್ವದಲ್ಲಿ ಶಿಕಾರಿಪುರದಲ್ಲಿ ನಿನ್ನೆ ದಿನ ಪ್ರತಿಭಟನೆಯನ್ನ ಕೈಗೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ರೊಚ್ಚಿಗೆದ್ದ ಕಾರ್ಯಕರ್ತರು ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಮುಂದಾದರು. 

ಇನ್ನೂ ಬಿಎಸ್‌ವೈರವರ ಮನೆಗೆ ಈ ಹಿಂದೆ ನಡೆದಿದ್ದ ಮುತ್ತಿಗೆ ಪ್ರಯತ್ನದ ಬಗ್ಗೆ ಅರಿತಿದ್ದ ಪೊಲೀಸರು , ಬಿಗಿ ಭದ್ರತೆ ಕೈಗೊಂಡಿದ್ದರು. ಮಾಜಿ ಸಿಎಂ ರವರ ಮನೆ ಸಮೀಪ ಬ್ಯಾರಿಕೇಡ್‌ ಹಾಕಿ ರಸ್ತೆಗಳನ್ನ ಬಂದ್‌ ಮಾಡಿದ್ದರು. ಇನ್ನೂ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾಗುತ್ತಲೇ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಬಂದು ಎಲ್ಲರನ್ನು ವಶಕ್ಕೆ ಪಡೆದರ

ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

Share This Article
Leave a Comment

Leave a Reply

Your email address will not be published. Required fields are marked *