ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ! ವಿವರ ಇಲ್ಲಿದೆ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA  Mar 1, 2024    ಶಿವಮೊಗ್ಗ: ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿ ಯನ್ನು ಆಹ್ವಾನಿಸಲಾಗಿದೆ. 

ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳುಮತ್ತು ಸೊರಬ ತಾ. ಚಂದ್ರಗುತ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವ ಹಾಗೂ 1 ವರ್ಷ ಅನುಭವ ವಿರುವ ಅಭ್ಯರ್ಥಿಗಳು ಕಂಪ್ಯೂಟರ್‌ಸಾಕ್ಷರತೆ ಹೊಂದಿದ್ದು, 45 ವರ್ಷ ವಯಸ್ಸಿನೊಳಗಿರಬೇಕು. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ‘ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ಮಾ.14 ರೊಳಗೆ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor