Shimoga politics | ವಿರೋಧಕ್ಕೆ ಸಿಡಿದ ಬಿಜೆಪಿ ರಾಜ್ಯಾಧ್ಯಕ್ಷ | ದೈವಿಕ ಇಂಜಿನಿಯರ್ ಎಂದಿದ್ದೇಕೆ BYR | ಗಣಪತಿ ಮೆರವಣಿಗೆ ಬಗ್ಗೆ ಶಾಸಕರು ಹೇಳಿದ್ದೇನು
Shimoga politics talk , ಸಂಸದ ಬಿ ವೈ ರಾಘವೇಂದ್ರ, ಶಾಸಕ ಎಸ್ ಎನ್ ಚನ್ನಬಸಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , MP B Y Raghavendra, MLA S N Channabasappa, BJP state president B Y Vijayendra,

SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 19, 2024
ಎಲ್ಲರ ವಿಶ್ವಾಸ ಪಡೆದಿದ್ದೇನೆ
ಶಿವಮೊಗ್ಗದಲ್ಲಿ ಕಾರ್ಯಕ್ರಮವೊಂದನ್ನ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದೇ ಪಕ್ಷ ಸಂಘಟನೆ ಮಾಡುತ್ತಿದ್ದೇನೆ.ಮತ್ತೊಮ್ಮೆ ಬಿಜೆಪಿಯನ್ನ ರಾಜ್ಯದಲ್ಲಿ ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದಿದ್ದಾರೆ.
ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಹಿರಿಯರನ್ನ ಗಣನೆಗೆ ತೆಗೆದುಕೊಂಡಿಲ್ಲ ಎಂದು ದೂರುತ್ತಿದ್ದಾರೆ. ಆದರೆ ನಾನು ಎಲ್ಲರ ವಿಶ್ವಾಸವನ್ನು ತೆಗೆದುಕೊಂಡಿದ್ದೇನೆ. ಬಿಎಸ್‌ವೈ ಪುತ್ರ ಎಂಬ ಕಾರಣಕ್ಕೆ ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿಲ್ಲ. ಅವರ ಮಗ ಎನ್ನುವುದಕ್ಕೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ.
ದೈವಿಕ ಇಂಜಿನಿಯರ್
ವಿಶ್ವಕರ್ಮ ಸಮುದಾಯದ ಜಗತ್ತಿನ ದೈವಿಕ ಇಂಜಿನಿಯರ್ ಎಂದು ಕರೆಯಲಾಗುತ್ತದೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ವಿಶ್ವಕರ್ಮ ಜಯಂತಿ ಒಂದು ಪವಿತ್ರವಾದ ದಿನ.ಪ್ರಧಾನಿ ನರೇಂದ್ರ ಮೋದಿ ಕುಶಲಕರ್ಮಿಗಳ ರಕ್ಷಣೆಗಾಗಿ ಹಾಗೂ ಯುವಜನತೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲೆಂಬ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದು 8 ರಿಂದ 10 ಕೋಟಿ ಯುವ ಕುಶಲಕರ್ಮಿಗಳ ವೃತ್ತಿ ಜೀವನಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಅಂತಾ ತಿಳಿಸಿದರು.
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ
ಶಿವಮೊಗ್ಗದಲ್ಲಿ ನಡೆದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ರಾಜಬೀದಿ ಉತ್ಸವವು ಯುಶಸ್ವಿಯಾಗಿ ಸಮಾಪ್ತಿಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್‌ಎನ್ ಚನ್ನಬಸಪ್ಪ ಗಣಪತಿ ವಿಸರ್ಜನಾ ಮೆರವಣಿಗೆಯೂ ನೆನಪಿನಲ್ಲಿ ಉಳಿಯುವಂತೆ ಮಾಡಿದೆ. ಲಕ್ಷಾಂತರ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ವಿಶೇಷವಾಗಿ ಈ ಬಾರಿ ಹೆಣ್ಣು ಮಕ್ಕಳು ಹೆಚ್ಚು ಭಾಗವಹಿಸಿದ್ದರು ಎಂದು ವಿವರಿಸಿದ್ದಾರೆ.
ಇದೇ ವೇಳೆ ಮುಂಬರುವ ಈದ್ ಮಿಲಾದ್ ಮೆರವಣಿಗೆ ಕೂಡ ಶಾಂತಿಯುತವಾಗಿ ನಡೆಯಲಿದೆ ಎಂದ ಚನ್ನಬಸಪ್ಪರವರು ಮೊದ ಮೊದಲು ಪಾಕಿಸ್ತಾನಕ್ಕೆ ಜೈ ಎನ್ನುತ್ತಿದ್ದರು ಈ ಪಾಲಿಸ್ತೈನ್‌ಗೆ ಜೈ ಎನ್ನುತ್ತಿದ್ದಾರೆ. ಈ ಬಗ್ಗೆ ಸಮುದಾಯದವರು ಗಮನಿಸಬೇಕು ಎಂದು ತಿಳಿಸಿದರು.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ