Shivamogga City Corporation : ಇವತ್ತು ಹಿಂದೂ ಜಾಗರಣ ವೇದಿಕೆಯಿಂದ ಪಾಲಿಕೆ ಎದುರು ಪ್ರತಿಭಟನೆ! ಕಾರಣವೇನು?
Shivamogga City Corporation : Hindu Jagran Vedike to stage protest in front of municipal corporation today What is the reason?
ಶಿವಮೊಗ್ಗ ಮಹಾನಗರ ಪಾಲಿಕೆ ಎದುರು ಇವತ್ತು ಮಧ್ಯಾಹ್ನದ ನಂತರ ಹಿಂದೂ ಜಾಗರಣ ವೇದಿಕೆ ಸಂಘಟನೆ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಸಂಬಂಧ ತನ್ನ ಕಾರ್ಯಕರ್ತರಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕರೆಕೊಟ್ಟಿದೆ.
ಇನ್ನೂ ಈ ಪ್ರತಿಭಟನೆಗೆ ಕಾರಣ ಪಾಲಿಕೆಯಲ್ಲಿ ಟಿಪ್ಪು ಸುಲ್ತಾನ್ ಫೋಟೋ ಅನಾವರಣ. ಈ ಹಿಂದೆ ಪಾಲಿಕೆಯಲ್ಲಿ ವೀರ ಸಾವರ್ಕರ್ರವರ ಫೋಟೋವನ್ನು ಹಾಕಲಾಗಿತ್ತು. ಈ ನಡುವೆ ನಿನ್ನೆ ಪಾಲಿಕೆಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷೆಯ ಪದಗ್ರಹಣ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ರವರ ಫೋಟೋವನ್ನು ಕಚೇರಿಯಲ್ಲಿ ಹಾಕಲಾಗಿದೆ. ಇದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಟಿಪ್ಪುವಿನ ಫೋಟೋವನ್ನು ಮಹಾನಗರ ಪಾಲಿಕೆಯಲ್ಲಿ ಹಾಕಿರೋದ್ದನ್ನು ಖಂಡಿಸಿ ಮಧ್ಯಾಹ್ನ 3 ಗಂಟೆಗೆ ಪಾಲಿಕೆ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com