ಶಿವಮೊಗ್ಗದಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಕ್ಕೆ ರೈಲ್ವೆ ಮಾರ್ಗಕ್ಕೆ ಮಾಜಿ ಪ್ರಧಾನಿ ಮನವಿ | ಓಕೆ ಅನ್ನುತ್ತಾರಾ ಮೋದಿ!?
Former Prime Minister HD Deve Gowda, request to Narendra Modi government , approve Shivamogga-Sringeri railway line

SHIVAMOGGA| MALENADUTODAY NEWS | ಮಲೆನಾಡು ಟುಡೆ Mar 13, 2025
ಸಂಸತ್ ಕಲಾಪದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಶಿವಮೊಗ್ಗ-ಶೃಂಗೇರಿ ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ರಾಜ್ಯಸಭೆಯ ಕಲಾಪದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಶೃಂಗೇರಿ ನಡುವೆ ರೈಲ್ವೆ ಮಾರ್ಗ ನಿರ್ಮಾಣಕ್ಕೆ ನರೇಂದ್ರ ಮೋದಿ ಸರ್ಕಾರ ಚಾಲನೆ ನೀಡಬೇಕು, ಈ ಬಗ್ಗೆ ರೈಲ್ವೆ ಸಚಿವರು ತಕ್ಷಣ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ರೈಲ್ವೆ ಅಭಿವೃದ್ಧಿ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಹೊಗಳಿದ ಮಾಜಿ ಪ್ರಧಾನಿಯವರು, ಕ್ಷಿಪ್ರಗತಿಯಲ್ಲಿ ರೈಲ್ವೆ ಯೋಜನೆಗಳು ಜಾರಿಯಾಗುತ್ತಿರುವುದನ್ನು ಶ್ಲಾಘಿಸಿದರು. ಹಿಂದಿನ ಸರ್ಕಾರಗಳಲ್ಲಿನ ವಿಳಂಬ ಪ್ರಕ್ರಿಯೆಗಳನ್ನು ಪ್ರಸ್ತಾಪಿಸಿದ ಗೌಡರು, ಬೆಂಗಳೂರಿನಿಂದ ವಿವಿದೆಡೆಗೆ ಅಗತ್ಯವಿರುವ ರೈಲ್ವೆ ಯೋಜನೆಗಳನ್ನು ಜಾರಿಗೆ ತರಬೇಕು ಎಂದರು. ಅಲ್ಲದೆ ಬಸ್ ದರ ದುಬಾರಿಯಾಗಿದ್ದು, ಜನರಿಗೆ ರೈಲ್ವೆ ಪ್ರಯಾಣ ಸುಲಭ ಹಾಗೂ ಸಸ್ತಾ ಆಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಕಾಮಗಾರಿಗಳನ್ನು ಹೆಚ್ಚು ಹೆಚ್ಚು ಜಾರಿಗೆ ತರಬೇಕು ಎಂದು ಮನವಿ ಮಾಡಿದರು.