ಮಹಾ ಕುಂಭ ಮೇಳಕ್ಕೆ ಶಿವಮೊಗ್ಗದಿಂದ ಟ್ರೈನ್ | ರೈಲ್ವೆ ಇಲಾಖೆಯ ಈ ಮಾಹಿತಿ ನಿಮ್ಮ ಅನುಕೂಲಕ್ಕಾಗಿ
Shivamogga Town to Banaras Special Express Train Details, train to maha kumbha mela from shivamogga

SHIVAMOGGA | MALENADUTODAY NEWS | ಮಲೆನಾಡು ಟುಡೆ Feb 18, 2025
ಶಿವಮೊಗ್ಗದಿಂದ ಮಹಾ ಕುಂಭ ಮೇಳಕ್ಕೆ ವಿಶೇಷ ಟ್ರೈನ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಈ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದೆ. ಮಾಹಿತಿಯನ್ನು ಗಮನಿಸುವುದಾದರೆ,
ಕುಂಭ ಮೇಳದ ಪ್ರಯುಕ್ತ ಶಿವಮೊಗ್ಗ ಟೌನ್ ಮತ್ತು ಬನಾರಸ್ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ಇದು ಒಂದು ಟ್ರಿಪ್ ಸಂಚರಿಸುವ ವಿಶೇಷ ಟ್ರೈನ್ ಆಗಿದೆ. ಕುಂಭ ಮೇಳದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ರೈಲ್ವೆ ಮಂಡಳಿಯು ಶಿವಮೊಗ್ಗ ಟೌನ್ ಮತ್ತು ಬನಾರಸ್ ನಡುವೆ ಒಂದು ಟ್ರಿಪ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ಅವಕಾಶ ಕಲ್ಪಿಸಿದೆ.
ರೈಲು ಸಂಖ್ಯೆ 06223 ಶಿವಮೊಗ್ಗ ಟೌನ್ ಟು ಬನಾರಸ್ ವಿಶೇಷ ಎಕ್ಸ್‌ಪ್ರೆಸ್ ರೈಲು ಶಿವಮೊಗ್ಗ ಟೌನ್‌ನಿಂದ ಫೆಬ್ರವರಿ 22, 2025 ರಂದು ಸಂಜೆ 4:40 ಕ್ಕೆ ಹೊರಟು, ಫೆಬ್ರವರಿ 24, 2025 ರಂದು ಮಧ್ಯಾಹ್ನ 3:00 ಗಂಟೆಗೆ ಬನಾರಸ್ ತಲುಪಲಿದೆ.
ರೈಲು ಸಂಖ್ಯೆ 06224 ಬನಾರಸ್ - ಶಿವಮೊಗ್ಗ ಟೌನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಬನಾರಸ್‌ನಿಂದ ಫೆಬ್ರವರಿ 25, 2025 ರಂದು ಬೆಳಗಿನ ಜಾವ 1:30 ಕ್ಕೆ ಹೊರಟು, ಫೆಬ್ರವರಿ 27, 2025 ರಂದು ಬೆಳಿಗ್ಗೆ 6:45 ಕ್ಕೆ ಶಿವಮೊಗ್ಗ ಟೌನ್ ನಿಲ್ದಾಣಕ್ಕೆ ಆಗಮಿಸಲಿದೆ.
ಈ ರೈಲು ಭದ್ರಾವತಿ, ಬಿರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ಹೊಸಪೇಟೆ, ಕೊಪ್ಪಳ, ಗದಗ, ಹೋಳೆ ಆಲೂರು, ಬದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನ ಬಾಗೇವಾಡಿ ರೋಡ್, ವಿಜಯಪುರ, ಇಂಡಿ ರೋಡ್, ಸೋಲಾಪುರ, ದೌಂಡ್, ಕೊಪರಗಾಂವ್, ಮನ್ಮಾಡ್, ಭುಸಾವಲ್, ಇಟಾರ್ಸಿ, ಪಿಪರಿಯಾ, ನರಸಿಂಗ್‌ಪುರ್, ಜಬಲ್‌ಪುರ್, ಕಟ್ಟಿ, ಮೈಹಾರ್, ಸಲ್ಮಾ, ಮಾಣಿಕ್‌ಪುರ್, ಪ್ರಯಾಗ್‌ರಾಜ್ ಚಿಯೋಕಿ ಮತ್ತು ಮಿರ್ಜಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ವಿಶೇಷ ರೈಲುಗಳು ಹನ್ನೊಂದು ಎಸಿ ತ್ರಿ ಟೈರ್ ಬೋಗಿಗಳು, ನಾಲ್ಕು ಸ್ವೀಪರ್ ಕ್ಲಾಸ್ ಬೋಗಿಗಳು, ಎರಡು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಲಗೇಜ್/ಜನರೇಟರ್/ಬ್ರೇಕ್ ವ್ಯಾನ್‌ಗಳನ್ನು ಒಳಗೊಂಡಿರುತ್ತವೆ.
ಈ ರೈಲುಗಳ ಪ್ರತಿ ನಿಲ್ದಾಣದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್‌ಗಳ ಕುರಿತು ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆಯಬಹುದು.
SUMMARY | Shivamogga Town to Banaras Special Express Train Details, train to maha kumbha mela from shivamogga
KEY WORDS | Shivamogga Town to Banaras Special Express Train Details, train to maha kumbha mela from shivamogga