ಭದ್ರಾವತಿಯಲ್ಲಿ ಬೆಲ್ಲ ಕಲಬೆರಕೆ | ಪುಡ್‌ನಲ್ಲಿ ನಿಷೇದಿತ ಕಲರ್, ಟೆಸ್ಟಿಂಗ್ ಪೌಡರ್ | DC ಗುರುದತ್ತ ಹೆಗೆಡೆ ಮಹತ್ವದ ಸೂಚನೆ
Consumer Protection Meeting ಗ್ರಾಹಕರ ಸಂರಕ್ಷಣಾ ಸಭೆಯಲ್ಲಿ ಮಾತನಾಡಿದ ಡಿಸಿ ಗುರುದತ್ತ ಹೆಗೆಡೆಯವರು ಅಧಿಕಾರಿಗಳಿಗೆ ವಿವಿಧ ಸೂಚನೆಗಳನ್ನ ನೀಡಿದರು
SHIVAMOGGA | MALENADUTODAY NEWS | Aug 28, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆಯವರು ಇವತ್ತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗ್ರಾಹಕರ ಸಂರಕ್ಷಣಾ ಸಭೆಯನ್ನು ನಡೆಸಿದ್ದಾರೆ. ಈ ವೇಳೆ ಕೇಳಿಬಂದ ವಿವಿಧ ದೂರುಗಳಿಗೆ ಸಂಬಂಧಿಸಿದಂತೆ, ಅವರು ಪ್ರಮುಖ ಸೂಚನೆಗಳನ್ನ ಅಧಿಕಾರಿಗಳಿಗೆ ನೀಡಿದ್ದಾರೆ.
ಭದ್ರಾವತಿಯಲ್ಲಿ ಬೆಲ್ಲ ಕಲಬೆರಕೆ
ಭದ್ರಾವತಿ ತಾಲ್ಲೂಕಿನಲ್ಲಿ ಬೆಲ್ಲ ತಯಾರಿಕಾ ಘಟಕಗಳಲ್ಲಿ ಬೆಲ್ಲ ತಯಾರಿಸಲು ರಾಸಾಯನಿಕ ವಸ್ತುಗಳನ್ನು ಬಳಕೆ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಡಿಸಿ ಗುರುದತ್ತ ಹೆಗೆಡೆಯವರು ಈ ಕುರಿತು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬಸ್ ನಿಲ್ದಾಣದಲ್ಲಿ ಒಂದು ಎರಡಕ್ಕೆ ಹೆಚ್ಚು ಕಾಸು
ಇನ್ನೊಂದೆಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಲ್ದಾಣಗಳಲ್ಲಿ ಶೌಚಾಲಯಗಳ ಬಳಕೆಗೆ ಹೆಚ್ಚುವರಿ ಶುಲ್ಕ ವಸೂಲಾತಿ ಮಾಡುತ್ತಿರುವ ಕುರಿತು ಹಾಗೂ ಕಾರ್ಗೋ ಸೇವೆಗಳಿಗೂ ಹೆಚ್ಚುವರಿ ಮೊತ್ತ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಸ್ವೀಕಾರಗೊಂಡಿರುವ ಬಗ್ಗೆ ಡಿಸಿಯವರು ಉತ್ತರಿಸಿದ್ದಾರೆ. ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಫಾಸ್ಟ್ ಪುಡ್‌ಗೆ ನಿಷೇಧಿತ ವಸ್ತು ಬಳಕೆ
ಇತ್ತ ಡಿಸಿ ಗುರುದತ್ತ ಹೆಗೆಡೆಯವರ ಮುಂದೆ ಹೋಟೆಲ್ ಹಾಗೂ ಫಾಸ್ಟ್ ಫುಡ್ ತಯಾರಿಕಾ ಅಂಗಡಿಗಳಲ್ಲಿ ನಿಷೇಧಿತ ಆಹಾರಗಳ ಬಣ್ಣಗಳನ್ನು ಬಳಸುತ್ತಿರುವ ಬಗ್ಗೆ ಪ್ರಸ್ತಾಪವಾಯಿತು ಜೊತೆಯಲ್ಲಿ ಅತಿ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಕೆ ಮಾಡುತ್ತಿರುವ ಬಗ್ಗೆ ದೂರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತಿಳುವಳಿಕೆ ನೀಡಿ ಹೋಟೆಲ್ ಮಾಲೀಕರು ಹಾಗೂ ಗ್ರಾಹಕರಿಗೆ ಜಾಗೃತಿ ಮೂಡಿಸುವಂತೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೆಡಿಕಲ್‌ಗಳ ಮೇಲೆ ಅನಿರೀಕ್ಷಿತ ದಾಳಿ
ಇಷ್ಟೆ ಅಲ್ಲದೆ ಮೆಡಿಕಲ್ ಸ್ಟೋರ್‌ಗಳು ಮತ್ತು ಜನೌಷಧ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳು ಕಳಪೆ ಗುಣಮಟ್ಟದಿಂದ ಕೂಡಿರುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳು ಕೇಳಿ ಬರುತ್ತಿದ್ದು ನಿಯಮಿತ ತಪಾಸಣೆ ಮತ್ತು ಅನಿರೀಕ್ಷಿತ ದಾಳಿಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನಷ್ಟು ಸುದ್ದಿಗಳು
Shivamogga | 30 ಸಾವಿರ ಕ್ಯೂಸೆಕ್ ಕ್ಕೂ ಅಧಿಕ ನೀರು ಬಿಡುಗಡೆ | ನಯಾಗರವಾದ ಜೋಗ ಜಲಪಾತ
ಶಿವಮೊಗ್ಗ-ಶಿರಾಳಕೊಪ್ಪ ಟೋಲ್ ಗೇಟ್ ವಿವಾದದ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದೇನು?
Shettihalli | ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ | ಅರಣ್ಯ ಇಲಾಖೆ ಶಾಕ್ | ನಾಲ್ವರು ಅರೆಸ್ಟ್
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಡಿಸಿ ಗುರುದತ್ತ ಹೆಗೆಡೆ,Consumer Protection Meeting , ಗ್ರಾಹಕರ ಸಂರಕ್ಷಣಾ ಸಭೆ