ಶೇಡ್ಗಾರು ಬಳಿಯಲ್ಲಿ ಜಿಂಕೆ ಬೇಟೆ ಕೇಸ್‌ | ನಾಲ್ವರಿಗೆ ತಲಾ ಮೂರು ವರ್ಷ ಶಿಕ್ಷೆ | ತೀರ್ಥಹಳ್ಳಿ ಕೋರ್ಟ್‌ ಮಹತ್ವದ ಆದೇಶ

Shivamogga thirthahalli court deer hunt case | 2018ರ ಆಗಸ್ಟ್ 2ರಂದು ಸಕ್ರೆಬೈಲು ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳು ನಡೆಸಿದ್ದ ದಾಳಿ ವೇಳೆ ಪತ್ತೆಯಾಗಿದ್ದ ಪ್ರಕರಣ ಇದಾಗಿದೆ

ಶೇಡ್ಗಾರು ಬಳಿಯಲ್ಲಿ ಜಿಂಕೆ ಬೇಟೆ ಕೇಸ್‌ | ನಾಲ್ವರಿಗೆ ತಲಾ ಮೂರು ವರ್ಷ ಶಿಕ್ಷೆ | ತೀರ್ಥಹಳ್ಳಿ ಕೋರ್ಟ್‌ ಮಹತ್ವದ ಆದೇಶ
Shivamogga thirthahalli court deer hunt case , ಸಕ್ರೆಬೈಲು ವನ್ಯಜೀವಿ ವಲಯ, ತೀರ್ಥಹಳ್ಳಿ ಕೋರ್ಟ್‌, ಜಿಂಕೆ ಬೇಟೆ

SHIVAMOGGA | MALENADUTODAY NEWS | Sep 1, 2024  ಮಲೆನಾಡು ಟುಡೆ 

ಮಹತ್ವದ ಪ್ರಕರಣವೊಂದರಲ್ಲಿ ಜಿಂಕೆ ಬೇಟೆಯಾಡಿದ ಆರೋಪ ಹಾಗೂ ಅದರ ಮಾಂಸ ಸಾಗಣೆಗೆ ಆರೋಪಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಕೋರ್ಟ್‌ ಆರೋಪಿಗಳಿಗೆ ಮೂರು ವರ್ಷ ಶಿಕ್ಷೆ ವಿಧಿಸಿದೆ. 



ಪ್ರಕರಣ ಸಂಬಂಧ ಒಟ್ಟು  ನಾಲ್ವರು ಮಂದಿಗೆ ತೀರ್ಥಹಳ್ಳಿಯ ಒಂದನೇ ಹೆಚ್ಚುವರಿ ನ್ಯಾಯಾಲಯ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 10,000 ದಂಡ ವಿಧಿಸಿ ಆದೇಶ ಮಾಡಿದೆ. 

ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಮಕ್ಕಿಬೈಲು ಗ್ರಾಮದ ಪ್ರಕಾಶ ಗೌಡ , ಹರೀಶ ಗೌಡ , ಎಸ್.ಅಂಬರೀಷ ಹಾಗೂ ಸಿಂಗನಬಿದಿರೆ ಸಮೀಪದ ಶೆಡ್ಗಾರು ಗ್ರಾಮದ ದಯಾನಂದ ಗೌಡ ಶಿಕ್ಷೆಗೊಳಗಾದವರು ಎಂದು ತಿಳಿದು ಬಂದಿದೆ. 

ಏನಿದು ಪ್ರಕರಣ

2018ರ ಆಗಸ್ಟ್ 2ರಂದು ಸಕ್ರೆಬೈಲು ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳು ಶೆಡ್ಗಾರು ರಸ್ತೆಯಲ್ಲಿ ಬರುತ್ತಿದ್ದ ಕಾರೊಂದನನ್ನ ತಡೆದು ಪರಿಶೀಲನೆ ನಡೆಸಿದಾಗ, ಅದರಲ್ಲಿ ಬೇಟೆ ಪತ್ತೆಯಾಗಿತ್ತು. ಅದರಲ್ಲಿದ್ದ ಚೀಲವೊಂದರಲ್ಲಿ 15 ಕೆ.ಜಿ. ಜಿಂಕೆ ಮಾಂಸ, ಕತ್ತಿ ಹಾಗೂ ಚೂರಿ ಪತ್ತೆಯಾಗಿತ್ತು.

ಈ ಸಂಬಂಧ ಪ್ರಕರಣ ದಾಖಲಿಸಿದ್ದ ಅರಣ್ಯ ಇಲಾಖೆ  ಸಿಬ್ಬಂದಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಇದೀಗ ಪ್ರಕರಣದ ವಿಚಾರಣೆ ಮುಗಿದು ಕೋರ್ಟ್‌ ಆರೋಪಿಗೆ ಮೂರು ವರ್ಷ ಶಿಕ್ಷೆ ವಿಧಿಸಿದೆ 

ಇನ್ನಷ್ಟು ಸುದ್ದಿಗಳು

ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?

ಅಗ್ನಿವೀರ್‌ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?

Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?