ಸೂಡ ವತಿಯಿಂದ ಕನಿಷ್ಠ 5000 ವಸತಿ ನಿವೇಶನ ಒದಗಿಸಲು ಕ್ರಮ |  ಹೆಚ್.ಎಸ್.ಸುಂದರೇಶ್ 

 The Bhadravathi Urban Development Authority intends to create at least 5,000 plots for the homeless and distribute them to the deserving

ಸೂಡ ವತಿಯಿಂದ ಕನಿಷ್ಠ 5000 ವಸತಿ ನಿವೇಶನ ಒದಗಿಸಲು ಕ್ರಮ |  ಹೆಚ್.ಎಸ್.ಸುಂದರೇಶ್ 
Sooda to provide at least 5000 residential plots

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 7, 2025

ಶಿವಮೊಗ್ಗ| ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ  ವಸತಿ ರಹಿತರಿಗೆ ಕನಿಷ್ಟ 5000 ನಿವೇಶನಗಳನ್ನಾದರೂ ಸೃಜಿಸಿ ಅರ್ಹರಿಗೆ ವಿತರಿಸುವ ಉದ್ದೇಶ ಹೊಂದಿದ್ದೇವೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ಅವರು ಹೇಳಿದರು.

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು. ನಗರದ ಹೊರವಲಯದಲ್ಲಿರುವ ಗೋಪಿಶೆಟ್ಟಿಕೊಪ್ಪದಲ್ಲಿ ಈಗಾಗಲೇ 104ಎಕರೆ ಭೂಪ್ರದೇಶವನ್ನು ಗುರುತಿಸಲಾಗಿದೆ. ಆ ಪೈಕಿ ಈಗಾಗಲೇ 30ಎಕರೆ ಭೂಮಿಯ ಮಾಲೀಕರು 50:50 ಅನುಪಾತದಲ್ಲಿ ನಿವೇಶನವನ್ನು ಹಸ್ತಾಂತರಿಸಲು ಒಡಂಬಡಿಕೆ ಮಾಡಿಕೊಟ್ಟಿದ್ದು, ಭೂಪರಿವರ್ತನೆಗೆ ಸರ್ಕಾರದ ಅನುಮತಿ ದೊರೆತಿದೆ. ಶೀಘ್ರದಲ್ಲಿ ಬಡಾವಣೆ ಅಭಿವೃದ್ಧಿಪಡಿಸುವ ಕಾರ್ಯ ಆರಂಭಿಸಲಾಗುವುದು. ಹಾಗೆಯೇ ಉಳಿದ ಭೂಮಿಯ ಭೂಮಾಲೀಕರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಕ್ರಮ ವಹಿಸಲಾಗುವುದು. ಸಮಾಲೋಚನೆಯ ನಂತರವೂ ಭೂಮಿಯನ್ನು ಪ್ರಾಧಿಕಾರಕ್ಕೆ ನೀಡಲು ಹಿಂದೆ ಸರಿದಲ್ಲಿ ಅಂತಹ ಮಾಲೀಕತ್ವದ ಭೂಮಿಯನ್ನು ನಿಯಮಾನುಸಾರ ಭೂಸ್ವಾದೀನಪಡಿಸಿಕೊಂಡು ಸರ್ಕಾರದ ಅನುಮತಿ ಪಡೆದು ಅಭಿವೃದ್ಧಿಪಡಿಸಲಾಗುವುದು ಎಂದರು.

ನಗರಕ್ಕೆ ಹೊಂದಿಕೊಂಡಂತಿರುವ ಪ್ರದೇಶದಲ್ಲಿ ಕನಿಷ್ಟ 1.20ಎಕರೆಗಿಂತ ಹೆಚ್ಚಿನ ಭೂಮಿಯನ್ನು 50:50ಅನುಪಾತದಲ್ಲಿಯಾದರೂ ಸರಿ ಅಥವಾ ಸಂಪೂರ್ಣ ಮಾಲೀಕತ್ವವನ್ನು ವಹಿಸಿಕೊಡಲು ಇಚ್ಚಿಸಿದಲ್ಲಿ ಸೂಡಾ ವತಿಯಿಂದ ಉತ್ತಮ ಬೆಲೆಗೆ ಖರೀದಿಸಿ, ಬಡಾವಣೆ ಸೃಜಿಸಿ, ಅರ್ಹರಿಗೆ ನಿವೇಶನ ವಿತರಿಸಲು ಕ್ರಮ ವಹಿಸಲಾಗುವುದು. 100ಎಕರೆ ಭೂಮಿ ಖರೀದಿಸಲು ಸೂಡಾ ಸಿದ್ದವಾಗಿದ್ದು, ಅದಕ್ಕಾಗಿ 70ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದರು. 

ಇದಲ್ಲದೇ ಪ್ರಾಧಿಕಾರದಿಂದ ರಚಿಸಲಾದ ಬಡಾವಣೆಗಳಿಗೆ ಮೂಲಭೂತ ಸೌಕರ್ಯ, ರಸ್ತೆ ಅಭಿವೃದ್ಧಿ, ಇತ್ಯಾದಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಸಾರ್ವಜನಿಕರ ಹಿತಾಸಕ್ತಿಗಾಗಿ ನಿರ್ವಹಿಸಲಾಗುವುದು ಎಂದ ಅವರು ಸ್ವಾಮಿ ವಿವೇಕಾನಂದ ಬಡಾವಣೆಯ ಮಹಿಳಾ ಪಾಲಿಟೆಕ್ನಿಕ್ಕಾಲೇಜು ಪಕ್ಕದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ, ಜೆ.ಹೆಚ್.ಪಟೇಲ್ಬಡಾವಣೆಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ, ಗೋಪಿಶೆಟ್ಟಿಕೊಪ್ಪ, ನಿಧಿಗೆ ಮಾಚೇನಹಳ್ಳಿ, ಸೋಮಿನಕೊಪ್ಪದಲ್ಲಿ ವಸತಿ ಸಮುಚ್ಛಯ, ಊರುಗಡೂರಿನ ಪ್ರಾಧಿಕಾರದ ವಸತಿ ಬಡಾವಣೆಯಲ್ಲಿ ಇರುವ 04 ಎಕರೆ ಪ್ರದೇಶದಲ್ಲಿ ವಸತಿ ಯೋಜನೆ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

SUMMARY | The Bhadravathi Urban Development Authority intends to create at least 5,000 plots for the homeless and distribute them to the deserving

KEYWORDS | Bhadravathi, Urban Development, suda,