ಈ ವಾರ ಶಿವಮೊಗ್ಗದ ಬಹುಮುಖ್ಯ ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ! ಎಲ್ಲೆಲ್ಲಿ ವಿವರ ಇಲ್ಲಿದೆ

There will be no electricity in most important areas of Shivamogga this week! Here's the details

ಈ ವಾರ ಶಿವಮೊಗ್ಗದ  ಬಹುಮುಖ್ಯ ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ! ಎಲ್ಲೆಲ್ಲಿ ವಿವರ ಇಲ್ಲಿದೆ
Power cut in Shivamogga

Shivamogga |  Jan 29, 2024  | Power cut in Shivamogga    ಜ.31 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

ಜ.29 ರಿಂದ ಫೆ.03 ರವರೆಗೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುರಿಂದ ಈ ಮಾರ್ಗಗಗಳಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.29 ರಿಂದ ಫೆ.03 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರುಳಿಹಳ್ಳಿ, ಗಣಿದಾಳು ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.