2-3 ಡಿಗ್ರಿ ಸೆಲ್ಸಿಯಸ್ ಕುಸಿಯಲಿದೆ ತಾಪಮಾನ | ಚಳಿಯ ನಡುವೆ ಮಳೆ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ
IMD, Meteorological Department Bangalore, Weather Forecast, Winter, Cloudy Weather, Today Weather Report, Bay of Bengal, Sri Lanka, Kerala, Tamil Nadu
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 27, 2024
ರಾಜ್ಯದಲ್ಲಿ ಚಳಿ ಚುರುಗುಟ್ಟಿಸಲಾರಂಭಿಸಿದೆ. ಇದರ ನಡುವೆ ವಾಯಭಾಗರ ಕುಸಿತದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ತಿಳಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡು ಪ್ರದೇಶದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (2-5) ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುವ ಸಾಧ್ಯತೆಯಿದೆ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಇದು ಸಾಮಾನ್ಯಕ್ಕಿಂತ (2-3) ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರಲಿದೆ ಎಂದು ತಿಳಿಸಿದೆ. ಕರಾವಳಿ ಹಾಗೂ ಉಳಿದ ಜಿಲ್ಲೆಗಳಲ್ಲಿ ತಾಪಮಾನ ಎಂದಿನಂತೆ ಇರಲಿದೆ ಎನ್ನಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಮುಂದಿನ ಎರಡೂರು ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ದಟ್ಟ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಶ್ರೀಲಂಕಾದ ದಕ್ಷಿಣ ಭಾಗದಲ್ಲಿ ಸೃಷ್ಟಿ ಯಾಗಿರುವ ವಾಯುಭಾರ ಕುಸಿತ ಮಂಗಳವಾರ ತೀವ್ರತೆ ಪಡೆದುಕೊಂಡಿರುವುದರಿಂದ ತಮಿಳುನಾಡು, ಕೇರಳದಲ್ಲಿ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಂಗಳವಾರ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಅಲ್ಲಲ್ಲಿ ಹಗುರ ಮಳೆಯಾಗಿದೆ. ಇನ್ನೂ 2 ದಿನ ಇದೇ ವಾತಾವರಣ ಮುಂದುವರೆಯಲಿದೆ.
ಇನ್ನೂ ಶಿವಮೊಗ್ಗದಲ್ಲಿಂದ ಗರಿಷ್ಟ 26.0 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಸಂಜೆ ಹೊತ್ತಿಗೆ ಕನಿಷ್ಟ 18.0 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
SUMMARY | IMD, Meteorological Department, Bangalore, Weather Forecast, Winter, Cloudy Weather, Today's Weather Report, Bay of Bengal, Sri Lanka, Kerala, Tamil Nadu.
KEY WORDS | IMD, Meteorological Department Bangalore, Weather Forecast, Winter, Cloudy Weather, Today Weather Report, Bay of Bengal, Sri Lanka, Kerala, Tamil Nadu.