ಹೊಸನಗರದಲ್ಲಿ ‘ಧರ್ಮಸ್ಥಳ’ ಜಾಗೃತಿ! ಶಿವಮೊಗ್ಗಕ್ಕೆ ಬರಲಿದ್ದಾರೆ ಚಕ್ರವರ್ತಿ ಸೂಲಿಬೆಲೆ! ಕೆಆರ್​ಎಸ್​ನಿಂದ ಬೆಂಗಳೂರು ಪಾದಯಾತ್ರೆ! TODAY @NEWS

A brief account of the incidents and reports that took place in Shivamogga district ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಗಳು ಹಾಗೂ ವರದಿಗಳ ಸಂಕ್ಷಿಪ್ತ ವಿವರ

ಹೊಸನಗರದಲ್ಲಿ ‘ಧರ್ಮಸ್ಥಳ’ ಜಾಗೃತಿ! ಶಿವಮೊಗ್ಗಕ್ಕೆ ಬರಲಿದ್ದಾರೆ ಚಕ್ರವರ್ತಿ ಸೂಲಿಬೆಲೆ!  ಕೆಆರ್​ಎಸ್​ನಿಂದ ಬೆಂಗಳೂರು ಪಾದಯಾತ್ರೆ! TODAY @NEWS

KARNATAKA NEWS/ ONLINE / Malenadu today/ Aug 25, 2023 SHIVAMOGGA NEWS

ಧರ್ಮಸ್ಥಳದಿಂದ ಪಾದಯಾತ್ರೆ 

ಧರ್ಮಸ್ತಳದ  ಸೌಜನ್ಯಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದಿಂದ ಆ.26ರಿಂದ ಬೆಳ್ತಂಗಡಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ  ಶಿವಮೊಗ್ಗದಲ್ಲಿ  ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಮೀರ್ ಮಾಹಿತಿ ನೀಡಿದ್ಧಾರೆ.  ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸೆ.8ರಂದು ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ ಅವರು ಬೆಳ್ತಂಗಡಿಯಿಂದ ಆರಂಭವಾಗುವ ಪಾದಯಾತ್ರೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಮಂಡ್ಯ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಮೂಲಕ ಬೆಂಗಳೂರು ತಲುಪಲಿದೆ ಎಂದರು. 


 ಆಗಸ್ಟ್ 28, 29 & 30 ಚಕ್ರವರ್ತಿ ಸೂಲಿಬೆಲೆಯವರಿಂದ ಉಪನ್ಯಾಸ ಕಾರ್ಯಕ್ರಮ

ಶಿವಮೊಗ್ಗ ಅಜೇಯ ಸಂಸ್ಕೃತಿ ಬಳಗ ಹಾಗೂ ನಮೋ ಬ್ರಿಗೇಡ್ ಶಿವಮೊಗ್ಗದ ವತಿಯಿಂದ "ಇನ್ನೂ ಮಲಗಿದರೆ, ಏಳುವಾಗ ಭಾರತವಿರುವುದಿಲ್ಲ !" ಎಂಬ ಶೀರ್ಷಿಕೆಯಡಿ ಪ್ರಖ್ಯಾತ ವಾಗ್ಮಿ ಹಾಗೂ ಚಿಂತಕರಾದ ಶ್ರೀ ಚಕ್ರವರ್ತಿ ಸೂಲಿಬೆಲೆಯವರಿಂದ ಆಗಸ್ಟ್ 28, 29 ಮತ್ತು 30 ರಂದು ಶಿವಮೊಗ್ಗದ ಕೋಟೆ ರಸ್ತೆಯ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆಚಾರ್ಯತ್ರಯರ ಭವನದಲ್ಲಿ ಪ್ರತಿದಿನ ಸಂಜೆ 6:30 ಕ್ಕೆ ಉಪನ್ಯಾಸ ಕಾರ್ಯಕ್ರಮವಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ 9019562277 ರಲ್ಲಿ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.


 ಧರ್ಮಸ್ಥಳ ಸಂಘದಿಂದ ಜಾಗೃತಿ ಕಾರ್ಯಕ್ರಮ 

ವರ್ಷದಿಂದ ವರ್ಷಕ್ಕೆ ಅರಣ್ಯ ನಾಶ ಹೆಚ್ಚಾಗುತ್ತಿದ್ದು, ಇದಕ್ಕೆಲ್ಲಾ ಮಾನವನ ಅತೀಯಾದ ದುರಾಶೆಯೇ ಕಾರಣವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿವಮೊಗ್ಗ ಜಿಲ್ಲಾ ನಿರ್ದೇಶಕರಾದ ಚಂದ್ರಶೇಖರ್ ತಿಳಿಸಿದ್ಧಾರೆ.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಹೊಸನಗರ ತಾಲೂಕು ಇದರ ಆಶ್ರಯದಲ್ಲಿ ತಾಲೂಕಿನ ವಾರಂಬಳ್ಳಿ ಗ್ರಾಮದ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ವಾತವರಣದಲ್ಲಿ ಉಷ್ಣತೆ ಏರಿಕೆಯಾಗುತ್ತಿದೆ. ಪ್ರಕೃತಿಯ ಮೇಲೆ ಮನುಷ್ಯನ ಅತೀಯಾದ ಸವಾರಿಯೇ ಇದಕ್ಕೆಲ್ಲಾ ಕಾರಣವಾಗಿದೆ. ಧಟ್ಟವಾದ ಅರಣ್ಯ ಪ್ರದೇಶವಿದ್ದಲ್ಲಿ ಹೆಚ್ಚು ಮಳೆ ಬೀಳುತ್ತದೆ. ನಾವು ಉಸಿರಾಡುವ ಗಾಳಿ,ಕುಡಿಯುವ ನೀರು,ತಿನ್ನುವ ಆಹಾರ ಇದಕ್ಕೆಲ್ಲಾ ಪುಕೃತಿ ಅತ್ಯವಶ್ಯಕವಾಗಿದೆ.ಪರಿಸರ ನಾಶ ಇದೇ ರೀತಿ ಮುಂದುವರೆದರೇ,ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪ್ರಾಕೃತಿಕ ವಿಕೋಪಗಳನ್ನು ಎದುರಿಸಬೇಕಾಗುತ್ತದೆ.ಆದ್ದರಿಂದ ಗಿಡ ಮರಗಳನ್ನು ಉಳಿಸಿ ಬೆಳಸುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಿದೆ.ಜಲಮೂಲಗಳ ಸಂರಕ್ಷಣೆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 42 ಕೆರೆಗಳು ಹಾಗೂ ರಾಜ್ಯದಲ್ಲಿ 600 ಕ್ಕೂ ಮಿಕ್ಕಿದ ಕೆರೆಗಳ ಹೂಳನ್ನೆತ್ತಿ ಕೆರೆಗಳ ಪುನಃಶ್ವೇತನ ಮಾಡಲಾಗಿದೆ ಎಂದರು. 


ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು